ಧ್ವಜ ಪ್ರದರ್ಶನ ಆರೋಪ: ಕೇಂದ್ರ ಸರ್ಕಾರ ಪ್ಯಾಲೆಸ್ತೇನ್ ಗೆ ಬೆಂಬಲ ನೀಡಿರುವಾಗ ನಾವೇನೂ ತಪ್ಪು ಮಾಡಿಲ್ಲ- ಬಂಧಿತರ ಹೇಳಿಕೆ

ಆರೋಪಿಗಳು ಸದ್ಯ ಬಂಧನದಲ್ಲಿದ್ದು, ವಿಚಾರಣೆ ಮುಂದುವರೆದಿದೆ. ಬಾವುಟ ಪ್ರದರ್ಶಿಸಿ ಎಂದು ಅವರಿಗೆ ಹೇಳಿದವರು ಯಾರೆಂಬ ಬಗ್ಗೆ ಮಾಹಿತಿ ತಿಳಿಯಲು ವಿಚಾರಣೆ ನಡೆಯುತ್ತಿದೆ.
ಪರಮೇಶ್ವರ್
ಪರಮೇಶ್ವರ್
Updated on

ಬೆಂಗಳೂರು: ಕೇಂದ್ರ ಸರ್ಕಾರ ಪ್ಯಾಲೆಸ್ತೇನ್ ಗೆ ಬೆಂಬಲ ವ್ಯಕ್ತಪಡಿಸಿರುವಾಗ ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಪ್ಯಾಲೆಸ್ತೇನ್ ಬಾವುಟ ಪ್ರದರ್ಶನ ಸಂಬಂಧ ಬಂಧಿಸಲಾಗಿರುವ ಆರೋಪಿಗಳು ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೇನ್ ಧ್ವಜ ಪ್ರದರ್ಶನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಿದ್ದೇವೆ. ಕೇಂದ್ರ ಸರ್ಕಾರ ಪ್ಯಾಲೆಸ್ತೇನ್ ಗೆ ಬೆಂಬಲ ನೀಡಿರುವಾಗ ನಾವು ಏನು ತಪ್ಪು ಮಾಡಿಲ್ಲ ಎಂದು ಅವರು ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಆರೋಪಿಗಳು ಸದ್ಯ ಬಂಧನದಲ್ಲಿದ್ದು, ವಿಚಾರಣೆ ಮುಂದುವರೆದಿದೆ. ಬಾವುಟ ಪ್ರದರ್ಶಿಸಿ ಎಂದು ಅವರಿಗೆ ಹೇಳಿದವರು ಯಾರೆಂಬ ಬಗ್ಗೆ ಮಾಹಿತಿ ತಿಳಿಯಲು ವಿಚಾರಣೆ ನಡೆಯುತ್ತಿದೆ. ಆರೋಪಿಗಳೆಲ್ಲರೂ 17 ರಿಂದ 21 ವರ್ಷದೊಳಗಿನವರಾಗಿದ್ದಾರೆ ಎಂದರು.

ಪರಮೇಶ್ವರ್
ಮೆಡಿಕಲ್ ಸ್ಟೋರ್ ಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ: ಡಾ ಜಿ ಪರಮೇಶ್ವರ್

ನಾಗಮಂಗಲ ಗಲಭೆ ವೇಳೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಇಂತಹ ಘೋಷಣೆಗಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲ. ಕೆಲವರು ಸುಳ್ಳು ಹೇಳಿಕೆ ನೀಡುತ್ತಿದ್ದು, ಈ ವಿಚಾರ ಕುರಿತು ಪರಿಶೀಲಿಸಲಾಗುತ್ತಿದೆ. ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ತನಿಖಾ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com