ಬೆಂಗಳೂರು: ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದ್ದು, ಆಕ್ಟೋಬರ್ 21ಕ್ಕೆ ಮತದಾನ ನಡೆಯಲಿದೆ.
ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಚುನಾವಣಾ ಆಯೋಗ ಇಂದು ಉಪಚುನಾವಣೆ ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 25 ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟವಾಗಲಿದೆ.
ಇಂದಿನಿಂದಲೇ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.
Advertisement