ಬೆಂಗಳೂರು: ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಎಂಎಸ್ ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ಲಘು ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಆಸ್ಪತ್ರೆಯ ಮೊದಲ ಮಹಡಿಯಲ್ಲಿರುವ ಕಾರ್ಡಿಯಾಕ್ ಕೇರ್ ಯೂನಿಟ್(CCU)ನಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ CCU ನಲ್ಲಿ ದಾಖಲಾಗಿದ್ದ ನಾಲ್ವರು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲಾಗಿದೆ. ಬೆಂಕಿ ಅವಘಡದಲ್ಲಿ ಯಾವುದೇ ರೋಗಿ ಅಥವಾ ಸಿಬ್ಬಂದಿಗೆ ಗಾಯಗಳಾಗಿಲ್ಲ" ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯನ್ನು ನಂದಿಸಲಾಗಿದೆ. ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ, ಅವರೆಲ್ಲರನ್ನೂ ಸ್ಥಳಾಂತರಿಸಲಾಗಿದೆ. ಬೆಂಕಿಯಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಇದೇ ಮೊದಲ ಬಾರಿಗೆ ಈ ರೀತಿ ಸಂಭವಿಸಿದೆ ಮತ್ತು ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ನಾವು ಶಂಕಿಸಿದ್ದೇವೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
Advertisement