ನಾಗಮಂಗಲ‌ ಕೋಮುಗಲಭೆ ಪ್ರಕರಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರ್. ಅಶೋಕ್ ವಿರುದ್ಧ FIR

ನಾಗಮಂಗಲ‌ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪದಡಿ ಅಶೋಕ್ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.
ಶೋಭಾ ಕರಂದ್ಲಾಜೆ ಮತ್ತು ಆರ್. ಅಶೋಕ್
ಶೋಭಾ ಕರಂದ್ಲಾಜೆ ಮತ್ತು ಆರ್. ಅಶೋಕ್
Updated on

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ.

ನಾಗಮಂಗಲ‌ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪದಡಿ ಅಶೋಕ್ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಇನ್ನು ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ 2 ವಿಡಿಯೋ ಲಗತ್ತಿಸಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ಇದೀಗ ನಾಗಮಂಗಲ ಟೌನ್​ ಠಾಣೆಯಲ್ಲಿ ಅರ್ ಅಶೋಕ್ ಹಾಗೂ ಶೋಭಾ‌ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 192ರ ಅಡಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ಶೋಭಾ ಕರಂದ್ಲಾಜೆ ಮತ್ತು ಆರ್. ಅಶೋಕ್
ಮುನಿರತ್ನ ಕ್ಷಮೆ ಕೇಳಲಿ; ನಾಗಮಂಗಲ ಗಲಭೆ ಕುಮಾರಸ್ವಾಮಿ ಮಾಡಿಸಿರಬಹುದು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com