ಬೆಂಗಳೂರು: ತಿರುಪತಿ ಲಡ್ಡು ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಶುಕ್ರವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.
ದೇವಸ್ಥಾನಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ(ಕೆಎಂಎಫ್) ನಂದಿನಿ ಬ್ರಾಂಡ್ ತುಪ್ಪವನ್ನು ಮಾತ್ರ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.
"ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ 'ಸೇವೆ'(ಸೇವೆಗಳು), ದೀಪಗಳು, ಎಲ್ಲಾ ರೀತಿಯ ಪ್ರಸಾದಗಳ ತಯಾರಿಕೆ ಮತ್ತು 'ದಾಸೋಹ ಭವನ'ಗಳಲ್ಲಿ ಹೋಮ್ ಬ್ರಾಂಡ್ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸಬೇಕೆಂದು ಆದೇಶಿಸಲಾಗಿದೆ.
ದೇವಸ್ಥಾನಗಳಲ್ಲಿ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸುತ್ತೋಲೆ ತಿಳಿಸಿದೆ.
ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
Advertisement