Muniratna (file pic)
ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನonline desk

ಮಹಿಳೆ ಮೇಲೆ ಅತ್ಯಾಚಾರ ಆರೋಪ: BJP ಶಾಸಕ ಮುನಿರತ್ನ ಮತ್ತೆ ಬಂಧನ

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.
Published on

ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ರಾಜರಾಜೇಶ್ವರಿ​ ನಗರ ಬಿಜೆಪಿ ಶಾಸಕ ಮುನಿರತ್ನ ಅವರು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಈ ಸಂಬಂಧ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.

Muniratna (file pic)
ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್​ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದವು.ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ನಡುವಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com