ಬೆಂಗಳೂರು: ಅಪಾಯದ ಸ್ಥಿತಿಯಲ್ಲಿರುವ ಮರಗಳ ತೆರವಿಗೆ ಅಭಿಯಾನ ಆರಂಭ..!

ದುರಂತಗಳ ತಪ್ಪಿಸಲು ಬಿಬಿಎಂಪಿ ಹಾಗೂ ಬೆಸ್ಕಾಂ ಜಂಟಿಯಾಗಿ ಕಾರ್ಯಾಚರಣೆ ನಡೆಸಲಿವೆ. ನಾಗರಿಕರಿಂದ ಬಂದ ದೂರುಗಳಿಂದ 1,371 ಮರಗಳು ಮತ್ತು 3,700 ಕೊಂಬೆಗಳನ್ನು ತೆರವುಗೊಳಿಸಲಾಗಿದೆ.
ಅಪಾಯಕಾರಿ ಮರಗಳ ತೆರವುಗೊಳಿಸುತ್ತಿರುವ ಬಿಬಿಎಂಪಿ.
ಅಪಾಯಕಾರಿ ಮರಗಳ ತೆರವುಗೊಳಿಸುತ್ತಿರುವ ಬಿಬಿಎಂಪಿ.
Updated on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಪಾಯ ಸ್ಥಿತಿಯಲ್ಲಿರುವ ಮರ, ಒಣಗಿದ ಮರ ಹಾಗೂ ಮರದ ರೆಂಬೆ, ಕೊಂಬೆಗಳು, ವಿದ್ಯುತ್‌ ಕಂಬಗಳನ್ನು ಆವರಿಸಿರುವ ಮರಗಳ ತೆರವು ಕಾರ್ಯಾಚರಣೆ ಅಭಿಯಾನವನ್ನು ಆರಂಭಿಸಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು, ದಕ್ಷಿಣ ವಲಯದ ಜಯನಗರದ ಕಮ್ಯುನಿಟಿ ಕಾಲೇಜು ಬಳಿ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದುರಂತಗಳ ತಪ್ಪಿಸಲು ಬಿಬಿಎಂಪಿ ಹಾಗೂ ಬೆಸ್ಕಾಂ ಜಂಟಿಯಾಗಿ ಕಾರ್ಯಾಚರಣೆ ನಡೆಸಲಿವೆ. ನಾಗರಿಕರಿಂದ ಬಂದ ದೂರುಗಳಿಂದ 1,371 ಮರಗಳು ಮತ್ತು 3,700 ಕೊಂಬೆಗಳನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಅರಣ್ಯ ವಿಭಾಗದಿಂದ ನಿರಂತರವಾಗಿ ಅಪಾಯ ಸ್ಥಿತಿಯಲ್ಲಿರುವ ಮರ ಕಟಾವು ಮಾಡಲಾಗುತ್ತಿದೆ. ಮಳೆಗಾಲದಲ್ಲಿ ಬಿರುಗಾಳಿಯಿಂದಾಗಿ ಮರಗಳು ಬೀಳುತ್ತವೆ. ಅವುಗಳ ತೆರವಿಗೆ ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿಯಾಗಿ ತೆರವು ಕಾರ್ಯಾಚರಣೆ ತಂಡಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಓಡಾಟ ಹಾಗೂ ವಾಹನ ದಟ್ಟಣೆ ಹೆಚ್ಚಿರುವಂತಹ ರಸ್ತೆಗಳಲ್ಲಿ ಮರದ ರೆಂಬೆ, ಕೊಂಬೆಗಳನ್ನು ರಾತ್ರಿ ವೇಳೆ ಕಟಾವು ಮಾಡಿ, ಕೂಡಲೇ ಡಂಪಿಂಗ್ ಯಾರ್ಡ್‌ಗೆ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ಅಪಾಯಕಾರಿ ಮರಗಳ ತೆರವುಗೊಳಿಸುತ್ತಿರುವ ಬಿಬಿಎಂಪಿ.
8,000 ರಸ್ತೆ ಗುಂಡಿಗಳ ಮುಚ್ಚಲಾಗಿದೆ; ನವೆಂಬರ್‌ನಲ್ಲಿ 660 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ: BBMP

ಮರದ ರೆಂಬೆ, ಕೊಂಬೆಗಳ ತೆರವು ಕಾರ್ಯಾಚರಣೆ ನಿರಂತರವಾಗಿರುತ್ತದೆ. ಪಾಲಿಕೆ ಹಾಗೂ ಬೆಸ್ಕಾಂ ಸೇರಿ ವಿದ್ಯುತ್ ತಂತಿಗಳಿಗೆ ತಗಲುವ ರೆಂಬೆಗಳನ್ನು ತೆರವು ಮಾಡುವ ಅಭಿಯಾನವನ್ನು ಶುಕ್ರವಾರದಿಂದ 10 ದಿನ ನಡೆಸಲಾಗುವುದು.ಮುಖ್ಯ ರಸ್ತೆಗಳಲ್ಲಿ ಸಾಕಷ್ಟು ಮರಗಳ ಕೊಂಬೆಗಳು ಇರುವುದರಿಂದ ವಿದ್ಯುತ್ ದೀಪಗಳ ಬೆಳಕನ್ನು ಅದು ತಡೆಯುತ್ತಿದೆ. ಹೀಗಾಗಿ ಈ ಕೊಂಬೆಗಳನ್ನು ತೆರವುಗೊಳಿಸಿ ರಸ್ತೆಗೆ ಸೂಕ್ತ ಬೆಳಕು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಮುಖ ರಸ್ತೆಗಳಲ್ಲಿ ಸಮೀಕ್ಷೆ ಮಾಡಿ ನಂತರ ಅಪಾಯ ಸ್ಥಿತಿಯಲ್ಲಿರುವ ಮರಗಳ ತೆರವು ಕೆಲಸ ಮಾಡಲಾಗುತ್ತಿದೆ. ನಗರದಲ್ಲಿ ಜುಲೈನಿಂದ ಈವರೆಗೆ ಒಣಗಿದ/ಅಪಾಯ ಸ್ಥಿತಿಯಲ್ಲಿರುವ 478 ಮರ ಹಾಗೂ 592 ಕೊಂಬೆಗಳನ್ನು ತೆರವುಗೊಳಿಸಲಾಗಿದೆ. ಅಲ್ಲದೆ ನಾಗರಿಕರಿಂದ ಬಂದಿರುವ ದೂರುಗಳನ್ನು ಆಧರಿಸಿ ಮಳೆ ಗಾಳಿಗೆ ಬಿದ್ದಂತಹ ಸುಮಾರು 1,371 ಮರಗಳು ಹಾಗೂ 3,700 ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರು ಒಣಗಿರುವ, ಅಪಾಯ ಸ್ಥಿತಿಯಲ್ಲಿರುವ ಮರ ಹಾಗೂ ಮರದ ರೆಂಬೆ, ಕೊಂಬೆಗಳು ಕಂಡುಬಂದರೆ ಅಥವಾ ಗಾಳಿ,ಮಳೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸಬೇಕಾದರೆ, ಬಿಬಿಎಂಪಿಯ ಸಹಾಯವಾಣಿ ಸಂಖ್ಯೆ 1533 ಅಥವಾ 080-22221188 / 08022660000 ಗೆ ಕರೆ ಮಾಡಬಹುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com