ದಸರಾ ಹಬ್ಬ: ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ, ವಿವರ ಇಲ್ಲಿದೆ ನೋಡಿ...

ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ. ಇದರಿಂದಾಗಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಓಡಾಟಕ್ಕೆ ಅನುಕೂಲವಾಗಲಿದೆ.

ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

1 ಸ್ಲೀಪರ್‌ ಬೋಗಿ

ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್‌

ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್‌ (17302)

ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌ (06233/06234)

ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್‌ಪ್ರೆಸ್‌ (17307)

ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್‌ (17308)

ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್‌ (16591)

ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ (16592)

ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16535)

ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16536)

(ಈ ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ)

2 ಸ್ಲೀಪರ್‌ ಬೋಗಿ

ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್‌

ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ (16228)

(ಈ ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ)

1 ಜನರಲ್‌ ಬೋಗಿ

ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್

ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ (16221)

ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌

ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274)

ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582)

ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213)

ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214)

ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌ (16225)

ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್‌ (16226)

ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365)

ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366)

ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್‌ (16239/16240)

ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267)

ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268)

ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269)

ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270)

ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್‌ಪ್ರೆಸ್‌ (16529)

ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com