ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳ ಬದಲಾಯಿಸಲು ಸರ್ಕಾರ ಮುಂದು!

ತುಂಗಭದ್ರಾ ಜಲಾಶಯ ಕರ್ನಾಟಕದ 9,26,438 ಎಕರೆ, ಆಂಧ್ರಪ್ರದೇಶದಲ್ಲಿ 6,25,097 ಎಕರೆ ಮತ್ತು ತೆಲಂಗಾಣದಲ್ಲಿ 87,000 ಎಕರೆ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರಮುಖ ನೀರಿನ ಮೂಲವಾಗಿದೆ.
ಜಲಾಶಯಕ್ಕೆ ಬಾಗಿನ ಅರ್ಪಿಸುತ್ತಿರುವ ಸಿಎಂ ಸಿದ್ದರಾಮಯ್ಯ.
ಜಲಾಶಯಕ್ಕೆ ಬಾಗಿನ ಅರ್ಪಿಸುತ್ತಿರುವ ಸಿಎಂ ಸಿದ್ದರಾಮಯ್ಯ.
Updated on

ಮುನಿರಾಬಾದ್ (ಕೊಪ್ಪಳ): ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಆದಷ್ಟು ಬೇಗ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ, ತೆಲಂಗಾಣ ಮತ್ತು ತುಂಗಭದ್ರಾ ಬೋರ್ಡ್ ಬಳಿ ಚರ್ಚೆ ನಡೆಸಿ ನೂತನ ಗೇಟ್ ಅಳವಡಿಕೆ ಮಾಡಲಾಗುವುದು. ಇದರ ಮೂಲಕ ನಮ್ಮ ರೈತರ ರಕ್ಷಣೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಕ್ರೆಸ್ಟ್ ಗೇಟ್ ಹಾಳಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ, ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ನಿರಂತರವಾಗಿ ಸಂವಹನ ನಡೆಸುತ್ತಿದ್ದೇನೆ. ದೇವರ ದಯೆ ಮತ್ತು ತಜ್ಞರ ತಂಡದಿಂದ ಗೇಟ್‌ನಲ್ಲಿ ತಾತ್ಕಾಲಿಕ ಸ್ಟಾಪ್ ಲಾಗ್‌ಗಳನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ.

ತುಂಗಭದ್ರಾ ಜಲಾಶಯ ಕರ್ನಾಟಕದ 9,26,438 ಎಕರೆ, ಆಂಧ್ರಪ್ರದೇಶದಲ್ಲಿ 6,25,097 ಎಕರೆ ಮತ್ತು ತೆಲಂಗಾಣದಲ್ಲಿ 87,000 ಎಕರೆ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರಮುಖ ನೀರಿನ ಮೂಲವಾಗಿದೆ. ಕ್ರೆಸ್ಟ್ ಗೇಟ್ ಮುರಿದ ನಂತರ ಮೂರು ರಾಜ್ಯಗಳ ರೈತರು ಆತಂಕಕ್ಕೊಳಗಾಗಿದ್ದರು. ಆ ವೇಳೆ ಜಲಾಶಯ ತುಂಬಲಿದ್ದು, ಬಾಗಿನ ಅರ್ಪಿಸಲು ಬರುತ್ತೇನೆಂದು ಹೇಳಿದ್ದೆ. ಅದೇ ರೀತಿ ಇಂದು ಬಾಗಿನ ಅರ್ಪಿಸಿದ್ದೇನೆಂದು ತಿಳಿಸಿದರು.

ಜಲಾಶಯಕ್ಕೆ ಬಾಗಿನ ಅರ್ಪಿಸುತ್ತಿರುವ ಸಿಎಂ ಸಿದ್ದರಾಮಯ್ಯ.
ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿದ್ದು ಇದೇ ಮೊದಲು!

"ಕ್ರೆಸ್ಟ್ ಗೇಟ್ ಮುರಿದ ನಂತರ, ಬಿಜೆಪಿ ಮತ್ತು ಇತರ ನಾಯಕರು ಘಟನೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸಿದರ್ದರು. ಆದರೆ ಇದು ತಾಂತ್ರಿಕ ದೋಷವೆಂದು ತಿಳಿದುಬಂದಿದೆ. ತುಂಗಭದ್ರಾ ಅಣೆಕಟ್ಟು ರಾಜ್ಯದ ಅತ್ಯಂತ ಹಳೆಯದಾಗಿದ್ದು, ಇದನ್ನು 1953 ರಲ್ಲಿ ನಿರ್ಮಿಸಲಾಗಿತ್ತು. ಪ್ರತಿ 50 ವರ್ಷಗಳಿಗೊಮ್ಮೆ ಕ್ರೆಸ್ಟ್ ಗೇಟ್‌ಗಳನ್ನು ಬದಲಾಯಿಸಬೇಕು. ಪ್ರಸ್ತುತ ಎದುರಾಗದ್ದ ಪರಿಸ್ಥಿತಿ ಎಲ್ಲರಿಗೂ ಪಾಠವಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಆಗಸ್ಟ್ 10ರಂದು 19ನೇ ಗೇಟ್ ಕಿತ್ತು ಹೋದಾಗ ಜಿಲ್ಲಾ ಮಂತ್ರಿಗಳು, ಎಂಡಿಯವರು ಕರೆ ಮಾಡಿ ಡ್ಯಾಮ್ ಅಪಾಯದಲ್ಲಿದೆ ಎಂದು ಪರಿಸ್ಥಿತಿಯ ಬಗ್ಗೆ ತಿಳಿಸಿದರು. ಆತಂಕ ಪಡಬೇಡಿ ಎಂದು ಹೇಳಿ ಮಾರನೇ ದಿನವೇ ಸ್ಥಳಕ್ಕೆ ಭೇಟಿ ನೀಡಿದೆ. ಅಧಿಕಾರಿಗಳು ಹಾಗೂ ತಾಂತ್ರಿಕ ಪರಿಣಿತರ ಹತ್ತಿರ ಮಾತನಾಡಿ ಎಲ್ಲಾ ಗೇಟ್ ಗಳಿಂದ ನೀರನ್ನು ಹರಿಸಿ ಎಂದು ಹೇಳಿ ತಕ್ಷಣ ಗೇಟ್ ತಯಾರು ಮಾಡುವ ಸಂಸ್ಥೆಗಳ ಜೊತೆ ಚರ್ಚೆ ನಡೆಸಿ ಗೇಟ್ ತಯಾರಿಗೆ ಆದೇಶ ನೀಡಿದೆ. ಡ್ಯಾಮಿನ ಗೇಟ್ ಕಿತ್ತು ಹೋದಂತಹ ಕಷ್ಟಕಾಲದಲ್ಲಿ ನಾವು ಎದೆಗುಂದದೆ ರೈತರ ಜಮೀನಿಗೆ ಮತ್ತೆ ನೀರನ್ನು ಕೊಡುವಂತಹ ಅವಕಾಶ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಸಿಕ್ಕಿರುವುದು ನಮ್ಮ ಭಾಗ್ಯ. ಈ ವರ್ಷದೊಳಗೆ ಜಲಾಶಯದಲ್ಲಿ 33 ಹೊಸ ಕ್ರೆಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com