ಮಹಾಲಕ್ಷ್ಮಿಯ ಹಂತಕನ ಗುರುತು ಪತ್ತೆ, ಶೀಘ್ರವೇ ಬಂಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್

ಶಂಕಿತನ ಬಗ್ಗೆ ಈ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಸಾವಿಗೀಡಾದ ಮಹಿಳೆ ಮತ್ತು ನಗರ ಪೊಲೀಸ್ ಆಯುಕ್ತರು(ಸಂಗ್ರಹ ಚಿತ್ರ)
ಸಾವಿಗೀಡಾದ ಮಹಿಳೆ ಮತ್ತು ನಗರ ಪೊಲೀಸ್ ಆಯುಕ್ತರು(ಸಂಗ್ರಹ ಚಿತ್ರ)
Updated on

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬೆಚ್ಚಿ ಬೀಳಿಸಿರುವ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಂತಕನು ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದ್ದು, ಶಂಕಿತನ ಬಗ್ಗೆ ಈ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ (Bengaluru Mahalaxmi Murder Case)​ ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರವೆ ಬಂಧಿಸುತ್ತೇವೆ.ಎಲ್ಲ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಯನ್ನು ಗುರುತಿಸಿ ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದರು.

ಗಣೇಶಮೂರ್ತಿ ಮೆರವಣಿಗೆ ವೇಳೆ ಬೆಂಗಳೂರಿನಲ್ಲಿ ಗಲಾಟೆ ಆಗಿಲ್ಲ. ಯಾವುದೇ ಅಹಿತಕರ ಘಟನೆ ಆಗಿಲ್ಲ ಎಂದರು. ಸಿಸಿಬಿ ಪೊಲೀಸರು ಓರ್ವ ವಿದೇಶಿ ಪ್ರಜೆ ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತರಿಂದ 1.5 ಕೋಟಿ ಮೌಲ್ಯದ ಒಂದು ಕೆಜಿ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಈಗಾಗಲೇ ತನಿಖೆ ಮುಂದುವರೆದಿದೆ. ಜುಲೈ ತಿಂಗಳಲ್ಲಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಿ, 4 ಎಂಡಿಎಂಎ ವಶಕ್ಕೆ ಪಡೆದಿದ್ದೇವು. ಈಗ ಈತನ ಜೊತೆಗಿದ್ದ ಮಹಿಳೆಯನ್ನು ಬಂಧಸಿಲಾಗಿದೆ. ಆರೋಪಿ ಆಫ್ರಿಕಾ ದೇಶದವನಾಗಿದ್ದು, 2018ರಲ್ಲಿ ಭಾರತಕ್ಕೆ ಬಂಧಿದ್ದನು. ಆತನ ಜೊತೆಗೆ ಸಿಕ್ಕ ಮಹಿಳಾ ಆರೋಪಿ ಆತನ ಜೊತೆ ಕೃತ್ಯದಲ್ಲಿ ಭಾಗಿಯಾಗಿದ್ದವಳು ಎಂದು ತಿಳಿಸಿದರು.

ಸಾವಿಗೀಡಾದ ಮಹಿಳೆ ಮತ್ತು ನಗರ ಪೊಲೀಸ್ ಆಯುಕ್ತರು(ಸಂಗ್ರಹ ಚಿತ್ರ)
ಅಕ್ರಮ ಸಂಬಂಧದಿಂದಲೇ ಮಹಾಲಕ್ಷ್ಮೀ ಭೀಕರ ಹತ್ಯೆ? ಆಕೆಯ ವಿಚ್ಚೇದಿತ ಪತಿ ಹೇಳಿದ್ದು ಹೀಗೆ...

ಇತ್ತೀಚಿಗೆ ಸೈಬರ್​ ವಂಚನೆ ಪ್ರಕರಣಗಳು ಹೆಚ್ಚಾಗಿವೆ. ಇಂತಹ ಪ್ರಕರಣವನ್ನು ದಕ್ಷಿಣ ಸೆನ್ ವಿಭಾಗದ ಪೊಲೀಸರು ಬೇಧಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿಲಾಗಿದೆ. ಕೆಂಗೇರಿಯಲ್ಲಿ ಬಾಡಿಗೆ ರೂಂ ಪಡೆದು ಸತತ ಸಂಪರ್ಕ ಮಾಡಿ, ಹೌಸ್ ಅರೆಸ್ಟ್ ಎಂದು 10 ದಿನ ಬೆದರಿಸಿ ಬರೊಬ್ಬರಿ 30 ಲಕ್ಷ ಹಣ ಪಡೆದಿದ್ದರು. ಬಳಿಕ ಇದು ಕಳ್ಳರ ಕೃತ್ಯ ಎಂಬುದು ತಿಳಿದು ವಂಚನೆಗೆ ಒಳಗಾಗದವರು ದೂರು ನೀಡಿದ್ದರು. ದೂರು ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ನಾಲ್ವರಿಗಾಗಿ ಹುಡುಕಾಟ ನಡೆಸಿದ್ದೇವೆ ಎಂದರು.

ಹುಳಿಮಾವು ಪೊಲೀಸರು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 35 ಲಕ್ಷ ಮೌಲ್ಯದ ಮಾಲು ವಶಕ್ಕೆ ಪಡೆಯಲಾಗಿದೆ‌. 11 ಪ್ರಕರಣ ಬೆಳಕಿಗೆ ಬಂದಿವೆ. ಮೊದಲ ಆರೋಪಿಯ ಮೇಲೆ 24 ಪ್ರಕರಣ ದಾಖಲಾಗಿವೆ. ಎರಡನೇ ಆರೋಪಿ ವಿರುದ್ಧ 20 ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು. ಕೊತ್ತನೂರಿನ ಐಷಾರಾಮಿ ವಿಲ್ಲಾಗಳಲ್ಲಿ ಕಳ್ಳತನ ಮಾಡುತಿದ್ದ ಆರೋಪಿಯನ್ನು ಬಂಧಿಸಲಾಗಿದೆ. 29ಲಕ್ಷ ಮೌಲ್ಯದ ಚಿನ್ನಾಭರಣ, ವಿದೇಶಿ ಕರೆನ್ಸಿ, ವಾಚ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಂಧನದಿಂದ 9 ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ತ್ರಿಪುರ ಮೂಲದವನಾಗಿದ್ದಾನೆ. ಕೊತ್ತನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com