
ಕೊಪ್ಪಳ: ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಉದುರಿ ಬಿದ್ದು ನಾಲ್ವರು ಮಕ್ಕಳು ಗಾಯಗೊಂಡ ಘಟನೆ ಇಂದು ಸೋಮವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಮೆಹಬೂಬ್ ನಗರದಲ್ಲಿ ನಡೆದಿದೆ. ಮಹಬೂಬ್ ನಗರದಲ್ಲಿರುವ 11 ನೇ ಅಂಗನವಾಡಿ ಕೇಂದ್ರದ ಮೇಲ್ಛಾವಣಿಯ ಕಾಂಕ್ರಿಟ್ ಉದುರಿ ಬಿದ್ದಿದೆ.
ಇಂದು ಮುಂಜಾನೆ ಅಂಗನವಾಡಿಗೆ ಎಂದಿನಂತೆ 20ಕ್ಕೂ ಹೆಚ್ಚು ಮಕ್ಕಳು ಬಂದಿದ್ದರು. ಒಳಗೆ ಕುಳಿತು ಆಟ-ಪಾಠಗಳಲ್ಲಿ ತೊಡಗಿದ್ದರು. ಆಗ ಇದ್ದಕ್ಕಿದ್ದಂತೆ ಕಾಂಕ್ರೀಟ್ ಉದುರಿ ಬಿದ್ದಿದೆ. ಇದರಿಂದ ನಾಲ್ಕು ಮಕ್ಕಳ ತಲೆ ಮತ್ತು ಕಾಲುಗಳಿಗೆ ಗಾಯವಾಗಿವೆ.
ಮೆಹಬೂಬ್ ನಗರದ ಅಮನ್, ಮನ್ವಿತ್,ಮದ೯ನ್, ಸುರಕ್ಷಾ ಎಂಬ ಮಕ್ಕಳು ಗಾಯಗೊಂಡಿದ್ದು, ಅವರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿವೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ನಗರಸಭೆ ಅಧ್ಯಕ್ಷ ಮತ್ತು ಸದಸ್ಯರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement