ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ, ಬೆಚ್ಚಿಬಿದ್ದ ರಾಜಧಾನಿ

ಇದು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ 2 ದಾಳಿಯಾಗಿದೆ. ಈ ಹಿಂದೆ ನಡೆದಿದ್ದ ಆ್ಯಸಿಡ್​ ದಾಳಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. 2022ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್​ ದಾಳಿ ನಡೆದಿತ್ತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
ಆ್ಯಸಿಡ್ ದಾಳಿ ಸಂತ್ರಸ್ತರ ಪರಿಹಾರ ಮೊತ್ತ ರೂ.10 ಲಕ್ಷಕ್ಕೆ ಏರಿಕೆ: ಸಚಿವ ಹಾಲಪ್ಪ ಆಚಾರ್‌

ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗಾಯಾಳು ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ 2 ದಾಳಿಯಾಗಿದೆ. ಈ ಹಿಂದೆ ನಡೆದಿದ್ದ ಆ್ಯಸಿಡ್​ ದಾಳಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. 2022ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್​ ದಾಳಿ ನಡೆದಿತ್ತು.

ಆರೋಪಿ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆ ಆಗಿತ್ತು. ಆರೋಪಿಯನ್ನು ಬಂಧಿಸುವಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದರು. ಇದೇ ಇದೇ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಆ್ಯಸಿಡ್​ ದಾಳಿ ನಡೆದಿರುವುದು ಜನರು ಮತ್ತಷ್ಟು ಭೀತಿಗೊಳಗಾಗುವಂತೆ ಮಾಡಿದೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com