ಕಾವೇರಿ 5ನೇ ಹಂತ ಕಾಮಗಾರಿ ಬಹುತೇಕ ಪೂರ್ಣ, ವಿಜಯದಶಮಿಗೆ ಉದ್ಘಾಟನೆ: ರಾಜ್ಯ ಸರ್ಕಾರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ ವಿಲೀನಗೊಂಡ 110 ಗ್ರಾಮಗಳ ಜನರ ಕನಸು ಶೀಘ್ರದಲ್ಲೇ ನನಸಾಗಲಿದೆ, ಕಾವೇರಿ ನೀರು ಮನೆ ಬಾಗಿಲಿಗೆ ಸಿಗುತ್ತದೆ ಎಂಬ 15 ವರ್ಷಗಳ ಅವರ ಕನಸು ನನಸಾಗುತ್ತಿದೆ.
ಟಿಕೆ ಹಳ್ಳಿ ನೀರು ಸಂಸ್ಕರಣಾ ಘಟಕ
ಟಿಕೆ ಹಳ್ಳಿ ನೀರು ಸಂಸ್ಕರಣಾ ಘಟಕ
Updated on

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾವೇರಿ 5ನೇ ಹಂತದ ಯೋಜನೆ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ವಿಜಯದಶಮಿ ವೇಳೆ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅದಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.

ಡಿಕೆ.ಶಿವಕುಮಾರ್ ಅವರು ಕೆಂಗೇರಿಯಲ್ಲಿ ನಡೆಯುತ್ತಿರುವ ಪೈಪ್‌ಲೈನ್ ಕಾಮಗಾರಿ, ಕನಕಪುರ ತಾಲೂಕಿನ ಹಾರೋಹಳ್ಳಿ ಪಂಪ್ ಸ್ಟೇಷನ್, ಮಳವಳ್ಳಿ ತಾಲೂಕಿನ ತೊರೆಕಡ್ನಹಳ್ಳಿಯ ನೀರು ಶುದ್ಧೀಕರಣ ಘಟಕ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ ವಿಲೀನಗೊಂಡ 110 ಗ್ರಾಮಗಳ ಜನರ ಕನಸು ಶೀಘ್ರದಲ್ಲೇ ನನಸಾಗಲಿದೆ, ಕಾವೇರಿ ನೀರು ಮನೆ ಬಾಗಿಲಿಗೆ ಸಿಗುತ್ತದೆ ಎಂಬ 15 ವರ್ಷಗಳ ಅವರ ಕನಸು ನನಸಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್‌ನಲ್ಲಿ ಉದ್ಘಾಟನೆ ಮಾಡಲಿದ್ದಾರೆಂದು ಹೇಳಿದರು.

ಇನ್ನು ಕೆಲವು ಸಣ್ಣಪುಟ್ಟ ಕೆಲಸಗಳು ಮಾತ್ರ ಬಾಕಿ ಉಳಿದಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ದಸರಾ ಸಂದರ್ಭದಲ್ಲಿ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಟಿಕೆ ಹಳ್ಳಿ ನೀರು ಸಂಸ್ಕರಣಾ ಘಟಕ
ಶೀಘ್ರದಲ್ಲೇ ಕಾವೇರಿ ನೀರಿನ ದರ ಏರಿಕೆ: ಬೆಂಗಳೂರಿಗರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕ್

ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಕೆಂಗೇರಿ, ಆನೇಕಲ್, ಯಶವಂತಪುರ, ಬ್ಯಾಟರಾಯನಪುರ, ಬೊಮ್ಮನಹಳ್ಳಿ ಮತ್ತು ಮಹದೇವಪುರ ಸೇರಿದಂತೆ ನಗರದ ಇತರ ಭಾಗಗಳಿಗೂ ಕಾವೇರಿ 5ನೇ ಹಂತ ಸೇವೆ ಒದಗಿಸಲಿದೆ. ಕಾವೇರಿ 5 ನೇ ಹಂತದ ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿ 775 MLD ನೀರು ಸಿಗಲಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಈಗಾಗಲೇ 10.64 ಲಕ್ಷ ನೀರಿನ ಸಂಪರ್ಕಗಳನ್ನು ಒದಗಿಸಿದೆ, ಈ ಹೊಸ ಹಂತದ ಮೂಲಕ ಹೆಚ್ಚುವರಿ 4 ಲಕ್ಷ ಸಂಪರ್ಕಗಳನ್ನು ಒದಗಿಸಲಾಗುವುದು. ಇದು ಮಂಡಳಿಯ ಆದಾಯವನ್ನು ಹೆಚ್ಚಿಸುತ್ತಿದೆ ಎಂದು ತಿಳಿಸಿದರು.

ಸುಸ್ಥಿರ ನೀರು ನಿರ್ವಹಣಾ ಯೋಜನೆಗಳ ಮೂಲಕ ಬೆಂಗಳೂರನ್ನು ನೀರಿನ ಹೆಚ್ಚುವರಿ ನಗರವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು,

ಇದೇ ವೇಳೆ ಕಾವೇರಿ ಆರತಿ ಪರಿಕಲ್ಪನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದಕ್ಕಾಗಿ ಸ್ಥಳ ಅಧ್ಯಯನಕ್ಕೆ ತಂಡವನ್ನು ಕಳುಹಿಸಲಾಗಿದೆ. ವರದಿ ಬಂದ ನಂತರ ಕಾಮಗಾರಿ ಆರಂಭವಾಗಲಿದೆ. 3-4 ಇಲಾಖೆಗಳು ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದರು.

ಈ ನಡುವೆ ಡಿಕೆ.ಶಿವಕುಮಾರ್ ಅವರು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರೊಂದಿಗೆ ಕೆಂಗೇರಿಯಿಂದ ತೊರೆಕಡ್ನಹಳ್ಳಿಗೆ ತೆರಳಿದ್ದು, ಹಲವರ ಹುಬ್ಬೇರುವಂತೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com