ಮಂಗಳೂರು: ಇಲ್ಲಿನ ಕಂಕನಾಡಿಯ ಬೆಂದೂರ್ ವೆಲ್ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ವೈದ್ಯರ ಎಡವಟ್ಟಿನಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ಮೃತನನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ 32 ವರ್ಷದ ಮೊಹ್ಮದ್ ಮಾಝಿನ್ ಎಂದು ಗುರುತಿಸಲಾಗಿದೆ. ಮೊಹ್ಮದ್ ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ ವೆಲ್ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ಗೆ ಬಂದಿದ್ದನು.
ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಆದರೆ ಹೆಚ್ಚು ಸಮಯ ಕಳೆದರೂ ಶಸ್ತ್ರಚಿಕಿತ್ಸೆ ಮುಗಿಯದಿದ್ದರಿಂದ ಸಂಶಯಗೊಂಡ ಪೋಷಕರು ಈ ಬಗ್ಗೆ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಕೂಡಲೇ ಮಾಝೀನ್ ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಆತ ಮೃತಪಟ್ಟಿರುವುದಾಗಿ ಘೋಷಿಸಿದರು.
ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಕದ್ರಿ ಠಾಣೆ ಪೊಲೀಸರು UDR ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement