ಲೈಂಗಿಕ ದೌರ್ಜನ್ಯ ಪ್ರಕರಣ: SIT ಕಸ್ಟಡಿಗೆ BJP ಶಾಸಕ ಮುನಿರತ್ನ

ಶಾಸಕ ಮುನಿರತ್ನ ವಿರುದ್ದ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬಂಧಿಸಿತ್ತು.
Muniratna (file pic)
ಮುನಿರತ್ನonline desk
Updated on

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನರನ್ನು 42ನೇ ಎಸಿಎಂಎಂ ಕೋರ್ಟ್​ ಎಸ್​ಐಟಿ ಕಸ್ಟಡಿಗೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎನ್ ಶಿವಕುಮಾರ್ ಅವರು ಅಕ್ಟೋಬರ್​ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಶಾಸಕ ಮುನಿರತ್ನ ವಿರುದ್ದ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬಂಧಿಸಿತ್ತು. ಇದೀಗ ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶಿಸಿದೆ.

ಶಾಸಕ ಮುನಿರತ್ನ ಬಳಿ ಹಲವು ಖಾಸಗಿ ಅಶ್ಲೀಲ ವಿಡಿಯೋಗಳಿದ್ದು ರಾಜಕೀಯ ಎದುರಾಳಿಗಳನ್ನು ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರೂ ಎಂದು 40 ವರ್ಷದ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Muniratna (file pic)
ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನ ಬೆಂಬಲಿಗರಿಂದ ಸಂತ್ರಸ್ತ ಮಹಿಳೆಗೆ ಬೆದರಿಕೆ, ಆಡಿಯೋ ವೈರಲ್..!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com