Karnataka Weather: ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ; ಉಡುಪಿ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌

ಬುಧವಾರ ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
Widespread rain across the state
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

Widespread rain across the state
ಇಂದಿನಿಂದ ರಾಜ್ಯದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ರೆಡ್‌ ಅಲರ್ಟ್‌ ಘೋಷಣೆ

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ ಎನ್ನಲಾಗಿದೆ. ಅಂತೆಯೇ ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಮುನ್ಸೂಚನೆಯಲ್ಲಿ, ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ವ್ಯವಸ್ಥೆಯಿಂದ ಉತ್ತರ ಆಂಧ್ರ ಮತ್ತು ದಕ್ಷಿಣ ಒಡಿಶಾದ ಕರಾವಳಿಯ ವಾಯುವ್ಯ ಕೊಲ್ಲಿಗೆ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com