ನಿವೇಶನ ಮಂಜೂರು ಮಾಡಿದ BJPಗೆ ಶಿಕ್ಷೆಯಾಗಬೇಕು: ಸಚಿವ ಚಲುವರಾಯಸ್ವಾಮಿ

ಹಗರಣ ಪ್ರಕರಣ ತನಿಖೆ ನಡೆಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ನಿರ್ದೇಶನ ನೀಡಿುವುದು ಹೊಸದೇನಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ.
ಸಚಿವ ಚಲುವರಾಯಸ್ವಾಮಿ
ಸಚಿವ ಚಲುವರಾಯಸ್ವಾಮಿ
Updated on

ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಲ್ಲ, ನಿವೇಶನ ಮಂಜೂರು ಮಾಡಿದ ಬಿಜೆಪಿಗೆ ಶಿಕ್ಷೆಯಾಗಬೇಕೆಂದು ಸಚಿವ ಚಲುವರಾಯಸ್ವಾಮಿಯವರು ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣ ಪ್ರಕರಣ ತನಿಖೆ ನಡೆಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ನಿರ್ದೇಶನ ನೀಡಿುವುದು ಹೊಸದೇನಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಬದಲಿಗೆ ವಿಪಕ್ಷಗಳ ಆರೋಪಗಳನ್ನು ಎದುರಿಸುತ್ತಾರೆಂದು ಹೇಳಿದರು.

ಹೈಕೋರ್ಟ್ ತೀರ್ಪು ಕುರಿತು ಪಕ್ಶಷ ಹಿರಿಯ ವಕೀಲರ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರು 50:50 ಅನುಪಾತದಡಿ ನಿವೇಶನ ಹಂಚಿಕೆಗೆ ಆದೇಶ ನೀಡಿಲ್ಲ, ನಿವೇಶನ ಹಂಚಿಕೆ ಮಾಡಿದ ಅಂದಿನ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಒತ್ತಡ ಹೇರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಇತರರು ತಮ್ಮ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳಿದ್ದರೂ ಹೇಗೆ ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆಂದು ಪ್ರಶ್ನಿಸಿದರು.

ಸಚಿವ ಚಲುವರಾಯಸ್ವಾಮಿ
ಮುಡಾ ಹಗರಣ: ದಶಕಗಳಿಂದ ಬೆಳೆದು ಬಂದ ಹಾದಿ, ಕೆದಕಿದಷ್ಟು ಆಳ!

ಮುಖ್ಯಮಂತ್ರಿಗೆ ಕಾಂಗ್ರೆಸ್ ಹೈಕಮಾಂಡ್, ಸಚಿವರು ಮತ್ತು ಶಾಸಕರು ಬೆಂಬಲವಿದೆ. ಹೀಗಾಗಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ಮೇಲಿನ ಆರೋಪಗಳು ರಾಜಕೀಯ ಪ್ರೇರಿತ ಎಂದು ಸ್ಪಷ್ಟಪಡಿಸಿದ್ದಾರೆ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಪ್ರತಿಪಕ್ಷಗಳ ಒತ್ತಡ ತಂತ್ರಕ್ಕೆ ಮಣಿಯುವುದಿಲ್ಲ ಎಂದರು.

ಇದೇ ವೇಳೆ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ಚಸ್ಸು ಹಾಳು ಮಾಡಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದುಳಿದ ವರ್ಗಗಳ ವೇದಿಕೆಯ ಸದಸ್ಯರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಮುಡಾ ನಿವೇಶನಗಳ ಹಂಚಿಕೆ ನಿಯಮಗಳ ಗಾಳಿಗೆ ತೂರಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ವಿರುದ್ಧ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com