ಬೆಂಗಳೂರು: ಆನೇಕಲ್‌ನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು

ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನೆಲೆಸಿದ್ದ ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಗಿರೀಶ್ ಬೋರಾ ಬಂಧನ
ಗಿರೀಶ್ ಬೋರಾ ಬಂಧನ
Updated on

ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಶಂಕಿತ ಉಗ್ರನೊಬ್ಬನನ್ನು ನಿನ್ನೆ ಅಸ್ಸಾಂನ ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.

ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನೆಲೆಸಿದ್ದ ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆಗಸ್ಟ್​ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದನು.

ಜಿಗಣಿಯ ಖಾಸಗಿ ಕಂಪನಿಯೊಂದರಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಗಿರೀಶ್ ಬೋರಾ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದನು. ಗಿರೀಶ್ ಬೋರಾನ ಬಗ್ಗೆ ಪಕ್ಕಾ ಮಾಹಿತಿ ಕಲೆಹಾಕಿದ್ದು ಅಸ್ಸಾಂ ಎನ್ಐಎ ತಂದ ಇದೀಗ ಶಂಕಿತ ಉಗ್ರನನ್ನು ಬಂಧಿಸಿದೆ.

ಗಿರೀಶ್ ಬೋರಾ ಬಂಧನ
ದೆಹಲಿ ಪೊಲೀಸರಿಂದ ಮಹತ್ತರ ಕಾರ್ಯಾಚರಣೆ: ಮೋಸ್ಟ್ ವಾಂಟೆಡ್ ಐಸಿಸ್ ಉಗ್ರನ ಬಂಧನ

ಸದ್ಯ ಶಂಕಿತ ಉಗ್ರನ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಆತನನ್ನು ಎನ್ಐಎ ಅಧಿಕಾರಿಗಳು ಅಸ್ಸಾಂಗೆ ಕರೆದೊಯ್ದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com