ಕುತ್ಲೂರು ಈಗ ‘ಶ್ರೇಷ್ಠ ಪ್ರವಾಸಿ ಗ್ರಾಮ: ʼನಕ್ಸಲ್‌ ಪೀಡಿತ ಪ್ರದೇಶʼವಾಗಿದ್ದ ಗ್ರಾಮಕ್ಕೆ 'ಅತ್ಯುತ್ತಮ ಸಾಹಸ ಪ್ರವಾಸಿ ತಾಣ' ಪ್ರಶಸ್ತಿಯ ಗರಿ!

ಸೆಪ್ಟೆಂಬರ್‌ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.
ಕುತ್ಲೂರಿ ಗ್ರಾಮದ ಪ್ರಮುಖ ಆಕರ್ಷಣೆಯಾಗಿರುವ ಅರ್ಬಿ ಜಲಪಾತ.
ಕುತ್ಲೂರಿ ಗ್ರಾಮದ ಪ್ರಮುಖ ಆಕರ್ಷಣೆಯಾಗಿರುವ ಅರ್ಬಿ ಜಲಪಾತ.
Updated on

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಕುತ್ಲೂರು ಗ್ರಾಮ ಇದೀಗ ರಾಷ್ಟ್ರದ ಗಮನ ಸೆಳೆದಿದೆ. ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಪ್ರತೀ ವರ್ಷ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ.

ಸೆಪ್ಟೆಂಬರ್‌ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.

ಈ ಮೂಲಕ ಒಂದು ಕಾಲದ ನಕ್ಸಲ್‌ ಪೀಡಿತ ಗ್ರಾಮವಾಗಿ ಗುರುತಿಸಿಕೊಂಡಿದ್ದ ಕುತ್ಲೂರು ಇದೀಗ ಪ್ರವಾಸೋದ್ಯಮ ಸಚಿವಾಲಯ ಆಯೋಜಿಸಿದ್ದ ಸ್ಪರ್ಧೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕರ್ನಾಟಕದ ಏಕೈಕ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ʼಬೆಸ್ಟ್ ಟೂರಿಸಂ ವಿಲೇಜ್ ಕಾಂಫಿಟೀಶನ್-2024ʼಅನ್ನು ಏರ್ಪಡಿಸಿತ್ತು.

ಈ ಸ್ಪರ್ಧೆಗೆ ನಾರಾವಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುತ್ಲೂರು ನಿವಾಸಿಗಳಾದ ಹರೀಶ್ ಡಿ. ಸಾಲ್ಯಾನ್, ಶಿವರಾಜ್ ಮತ್ತು ಸಂದೀಪ್ ಪೂಜಾರಿ ನಾರಾವಿ ಇವರು ಕುತ್ಲೂರು ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗಿನ ಬಗ್ಗೆ ಒಂದು ಡ್ಯಾಕ್ಯುಮೆಂಟರಿ ಮಾಡಿ ಅದನ್ನು ಸ್ಪರ್ಧಾ ನಿಯಮದಂತೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದರು. ಇದರ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಸಚಿವಾಲಯ ಪಡೆದುಕೊಂಡಿತ್ತು.

ದೇಶದ್ಯಾಂತ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮ ಆಯ್ಕೆಯಾಗಿದೆ. ಇದರಿಂದಾಗಿ ಭವಿಷ್ಯದಲ್ಲಿ ಕುತ್ಲೂರು ಗ್ರಾಮಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com