ಮೈಸೂರು: ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಬಂದಿದ್ದ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ ಘೋಷಣೆ ಕೂಗಿದ್ದಾರೆ.
ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ ವಾಪಾಸ್ ಕಳುಹಿಸಿದ್ದಾರೆ. ಈ ವೇಳೆ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಸಂದರ್ಭದಲ್ಲಿ ಮರೀಗೌಡ ಕಾರ್ಯಕರ್ತರನ್ನು ಸಮಾಧಾನಗೊಳಿಸಿ ಸಮಜಾಯಿಸಿ ನೀಡಲು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ನಿನ್ನ ಭಾಷಣ ಬೇಡ ಹೊರಡು ಎಂದು ಬಲವಂತವಾಗಿ ಕಾರು ಹತ್ತಿಸಿ ಕಳಿಸಿದ್ದಾರೆ. ದಿಕ್ಕಾರ ದಿಕ್ಕಾರ ಮರಿಗೌಡಗೆ ದಿಕ್ಕಾರ, ಸಿಎಂ ಸಿದ್ದರಾಮಯ್ಯಗೆ ಈ ಸ್ಥಿತಿ ಬರಲು ನೀನೆ ಕಾರಣ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಪಸ್ ಕಳಿಸಿದ್ದಾರೆ.
ಇಂದು ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಅವರು ಬೆಂಗಳೂರಿನಿಂದ ಮೈಸೂರು ನಗರಕ್ಕೆ ತೆರಳಿದ್ದಾರೆ. ಬಳಿಕ ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನೂ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Advertisement