ತುಮಕೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V. Somanna) ಅವರು ಇಂದು ಶುಕ್ರವಾರ ತುಮಕೂರು-ಯಶವಂತಪುರ ಮೆಮು (Tumkur-Yeshwanthpur Memu) ರೈಲಿಗೆ ಚಾಲನೆ ನೀಡಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತುಮಕೂರು-ಯಶವಂತಪುರ ಜೊತೆಗೆ ಬಾಣಸವಾಡಿ-ತುಮಕೂರು ನಡುವೆ ಹೊಸ ಮೆಮು ರೈಲು ಸೇವೆ ಆರಂಭ ಮಾಡುವುದಾಗಿ ಭರವಸೆ ನೀಡಿದರು.
ಮೆಮು ರೈಲು ಸಂಚಾರ: ತುಮಕೂರು-ಯಶವಂತಪುರ ನಡುವಿನ ಹೊಸ ಮೆಮು ರೈಲು ಇಂದೇ ಕಾರ್ಯಾರಂಭ ಮಾಡುತ್ತಿದ್ದು, ಭಾನುವಾರ ಹೊರತುಪಡಿಸಿ ವಾರದ ಎಲ್ಲ ದಿನ ಸಂಚರಿಸಲಿದೆ.
ರೈಲು ಸಂಖ್ಯೆ 06201: ತುಮಕೂರು-ಯಶವಂತಪುರ ಮೆಮು ರೈಲು ಪ್ರತಿದಿನ ಬೆಳಿಗ್ಗೆ 8.45ಕ್ಕೆ ತುಮಕೂರಿನಿಂದ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ.
ರೈಲು ಸಂಖ್ಯೆ 06202: ಯಶವಂತಪುರ-ತುಮಕೂರು ಮೆಮು ರೈಲು ಸಂಜೆ 5.40ಕ್ಕೆ ಯಶವಂತಪುರದಿಂದ ಹೊರಟು ಸಂಜೆ 7.05ಕ್ಕೆ ತುಮಕೂರು ತಲುಪಲಿದೆ.
ತುಮಕೂರು-ಬಾಣಸವಾಡಿ: ಸೆಪ್ಟೆಂಬರ್ 30 ರಿಂದ ಆರಂಭವಾಗಲಿರುವ ತುಮಕೂರು-ಬಾಣಸವಾಡಿ ಮೆಮು ರೈಲು ಸಂಚಾರ ಆರಂಭವಾಗಲಿದೆ. ಈ ಮೆಮು ರೈಲು ಸೋಮವಾರ ಮಾತ್ರ ಕಾರ್ಯನಿರ್ವಹಿಸಲಿದೆ.
ರೈಲು ಸಂಖ್ಯೆ 06205: ಬಾಣಸವಾಡಿ-ತುಮಕೂರು ಮೆಮು ರೈಲು ಪ್ರತಿ ಸೋಮವಾರ ಬೆಳಿಗ್ಗೆ 6.15ಕ್ಕೆ ಬಾಣಸವಾಡಿಯಿಂದ ಹೊರಟು ಬೆಳಿಗ್ಗೆ 8.35ಕ್ಕೆ ತುಮಕೂರು ತಲುಪಲಿದೆ.
ರೈಲು ಸಂಖ್ಯೆ 06205: ತುಮಕೂರು-ಬಾಣಸವಾಡಿ ಮೆಮು ರೈಲು ಪ್ರತಿ ಶನಿವಾರ ಸಂಜೆ 7.40ಕ್ಕೆ ತುಮಕೂರಿನಿಂದ ಹೊರಟು ರಾತ್ರಿ 10.05ಕ್ಕೆ ಬಾಣಸವಾಡಿ ತಲುಪಲಿದೆ.
ಇಂದು ಕಾರ್ಯಕ್ರಮದಲ್ಲಿ ಮಾಜಿ ಸಂಸದ ಜಿ.ಎಸ್ ಬಸವರಾಜು ಅವರು, ಶಾಸಕರಾದ ಸಿ.ಬಿ ಸುರೇಶ್ ಬಾಬು, ಬಿ. ಸುರೇಶ್ ಗೌಡ, ಎಂ.ಟಿ ಕೃಷ್ಣಪ್ಪ, ಜಿ.ಬಿ ಜ್ಯೋತಿ ಗಣೇಶ್, ವಿಧಾನಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ ಹಾಗೂ ಮಾಜಿ ಶಾಸಕರು, ಇತರೆ ಪ್ರಮುಖರು ಉಪಸ್ಥಿತರಿದ್ದರು.
Advertisement