ಅ.2 ರಂದು ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞೆ- ಡಿಸಿಎಂ ಡಿಕೆ ಶಿವಕುಮಾರ್

ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆಯವರೆಗೆ 1 ಕಿಮೀ ಉದ್ದದ ಗಾಂಧಿ ನಡಿಗೆ ಹಮ್ಮಿಕೊಂಡಿದ್ದೇವೆ. ಈ ಸಂದರ್ಭದಲ್ಲಿ ಸ್ವಚ್ಛತಾ ಪ್ರತಿಜ್ಞೆ ಮಾಡಲಿದ್ದೇವೆ
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿಕೊಂಡು100 ವರ್ಷವಾಗಿರುವ ಕಾರಣ, ಅಕ್ಟೋಬರ್ 2 ರಂದು ಗಾಂಧಿ ನಡಿಗೆ ಮತ್ತು ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶನಿವಾರ ಹೇಳಿದರು.

1924 ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಅಧಿವೇಶನವು ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿತ್ತು. ಇದರ ಸ್ಮರಣಾರ್ಥ ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆಯವರೆಗೆ 1 ಕಿಮೀ ಉದ್ದದ ಗಾಂಧಿ ನಡಿಗೆ ಹಮ್ಮಿಕೊಂಡಿದ್ದೇವೆ. ಈ ಸಂದರ್ಭದಲ್ಲಿ ಸ್ವಚ್ಛತಾ ಪ್ರತಿಜ್ಞೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಇದೇ ರೀತಿಯ ಕಾರ್ಯಕ್ರಮ ಆಯೋಜಿಸಲಾಗುವುದು, ಪಕ್ಷಾತೀತವಾಗಿ ರಾಜಕೀಯ ಮುಖಂಡರನ್ನು ಆಹ್ವಾನಿಸಲಾಗುವುದು, ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 500 ವಿದ್ಯಾರ್ಥಿಗಳಿಗೆ ಸ್ವಚ್ಛತೆ ಪ್ರತಿಜ್ಞಾವಿಧಿ ಬೋಧಿಸುತ್ತೇವೆ. ಈ ಕಾರ್ಯಕ್ರಮ ಯುವಜನರಲ್ಲಿ ಗಾಂಧಿ ತತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಅವರು ವಿವರಿಸಿದರು.

ಡಿಸಿಎಂ ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಆರೋಪಮುಕ್ತರಾಗುತ್ತಾರೆ: ಡಿಸಿಎಂ ಡಿಕೆ ಶಿವಕುಮಾರ್

ತಾಲೂಕು ಮಟ್ಟದ ಕಾರ್ಯಕ್ರಮಗಳಲ್ಲಿ ಶಾಸಕರು, ಜಿಲ್ಲಾ ಮಟ್ಟದ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ಗಾಂಧಿ ನಡಿಗೆಯಲ್ಲಿ ಎಲ್ಲರೂ ಶ್ವೇತ ವಸ್ತ್ರ ಧರಿಸುವಂತೆ ಮನವಿ ಮಾಡಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಯುವಜನತೆಗೆ ತಲುಪಿಸಲು ವರ್ಷವಿಡೀ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಆ್ಯಪ್ ಸಿದ್ದಪಡಿಸಲಾಗಿದೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್ ಲೈನ್ ಪ್ರಮಾಣ ಪತ್ರ ನೀಡಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com