ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223 ಅಡಿಯಲ್ಲಿ ಜಾರಿಗೊಳಿಸಿದ್ದ ನೋಟಿಸ್‌ನ್ನು ಹೈಕೋರ್ಟ್​ ರದ್ದುಪಡಿಸಿದೆ. ಅಲ್ಲದೆ, ಹೊಸದಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಹೈಕೋರ್ಟ್
ಹೈಕೋರ್ಟ್
Updated on

ಬೆಂಗಳೂರು: ಸಚಿವ ಶಿವಾನಂದ ಎಸ್ ಪಾಟೀಲ್ ಅವರು ಬಿಜೆಪಿ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223 ಅಡಿಯಲ್ಲಿ ಜಾರಿಗೊಳಿಸಿದ್ದ ನೋಟಿಸ್‌ನ್ನು ಹೈಕೋರ್ಟ್​ ರದ್ದುಪಡಿಸಿದೆ. ಅಲ್ಲದೆ, ಹೊಸದಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಶಿವಾನಂದ ಪಾಟೀಲ್​​​​ ಅವರ ಖಾಸಗಿ ದೂರು ಪರಿಗಣಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ನೋಟಿಸ್ ರದ್ದುಪಡಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ. ಪ್ರಕರಣದಲ್ಲಿ ಯತ್ನಾಳ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 156ರ ಅಡಿಯಲ್ಲಿ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಅದನ್ನು ವಿಚಾರಣೆಗೆ ಅಂಗೀಕರಿಸಿದ್ದ ವಿಶೇಷ ನ್ಯಾಯಾಲಯ, ಬಿಎನ್‌ಎಸ್‌ಎಸ್ ಸೆಕ್ಷನ್ 223 ಅಡಿಯಲ್ಲಿ ಯತ್ನಾಳ್ ಅವರಿಗೆ ನೇರವಾಗಿ ನೋಟಿಸ್ ಜಾರಿ ಮಾಡಿತ್ತು.

ಅದನ್ನು ಆಕ್ಷೇಪಿಸಿರುವ ಹೈಕೋರ್ಟ್, ಬಿಎನ್‌ಎಸ್‌ಎಸ್ ಸೆಕ್ಷನ್ 223ರ ಪ್ರಕಾರ ಖಾಸಗಿ ದೂರನ್ನು ದಾಖಲಿಸಿಕೊಳ್ಳುವ ಮೊದಲಿಗೆ ಮ್ಯಾಜಿಸ್ಟ್ರೇಟ್, ಆರೋಪಿಗೆ ದೂರಿನ ಪ್ರತಿ, ಎಫ್‌ಐಆರ್, ದೂರುದಾರರ ಮತ್ತು ಸಾಕ್ಷಿಯ ಸ್ವಯಂ ಹೇಳಿಕೆ ಹಾಗೂ ಪೂರಕ ದಾಖಲೆಗಳನ್ನು ಒದಗಿಸಬೇಕು. ಬಳಿಕ ಅವರ ಅವಹಾಲು ಆಲಿಸಬೇಕು. ಆ ನಂತರವೇ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆಗೆ ಮುಂದಾಗಬೇಕು. ಅದು ಬಿಟ್ಟು ನೇರವಾಗಿ ಕಾಗ್ನಿಜೆನ್ಸ್ (ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಪ್ರಕ್ರಿಯೆ) ತೆಗೆದುಕೊಂಡು ನೇರವಾಗಿ ನೋಟಿಸ್ ಜಾರಿ ಮಾಡಲು ಅವಕಾಶವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪ್ರಕ್ರಿಯೆಯಲ್ಲಿ ಕಾನೂನು ಲೋಪ ಕಂಡುಬಂದಿದೆ. ಆದ್ದರಿಂದ ಯತ್ನಾಳ್ ಅವರ ವಿರುದ್ಧದ ನೋಟಿಸ್ ರದ್ದುಪಡಿಸಲಾಗುತ್ತಿದೆ ಎಂದು ತಿಳಿಸಿದ ನ್ಯಾಯಪೀಠ, ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿದೆ. ಮುಂದಿನ ನಾಲ್ಕು ವಾರದಲ್ಲಿ ಹೈಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇರಿಸಿಕೊಂಡು ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು ಎಂದು ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.

ಹೈಕೋರ್ಟ್
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಆಗ್ರಹಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com