ಭಾನುವಾರ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ: ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೂ ಅಲರ್ಟ್' ಘೋಷಣೆ

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಸಾಂದರ್ಭಿಕ ಚಿತ್ರ
Video: ಭಾರಿ ಮಳೆ; ಮಳಖೇಡ ಕೋಟೆಯ ಗೋಡೆ ಮತ್ತೆ ಕುಸಿತ

ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ.

ಬೆಂಗಳೂರಿನಲ್ಲಿ ಭಾನುವಾರ ಹಾಗೂ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com