ಮೈಸೂರು: ಕರ್ನಾಟಕದಲ್ಲಿ ಮತ್ತೊಂದು Rave Party ವರದಿಯಾಗಿದ್ದು, ದಸರಾಗೆ ಸಜ್ಜಾಗುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸರು ಪಾರ್ಟಿಯಲ್ಲಿ ತೊಡಗಿದ್ದ 50 ಮಂದಿಯನ್ನು ಬಂಧಿಸಿದ್ದಾರೆ.
ಹೌದು.. ಕೆಆರ್‌ಎಸ್‌ನ ಹಿನ್ನೀರಿನ ಬಳಿ ಅನಧಿಕೃತವಾಗಿ ರೇವ್ ಪಾರ್ಟಿ ಆಯೋಜಿಸಿದ್ದ ಘಟನೆ ಮೈಸೂರನ್ನು ಬೆಚ್ಚಿಬೀಳಿಸಿದ್ದು, ಮಾಹಿತಿ ತಿಳಿದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಮದ್ಯದ ನಶೆಯಲ್ಲಿ ತೂರಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ನಿರ್ಬಂಧಿತ ಪ್ರದೇಶವಾದ ಇಲ್ಲಿ ಅನಧಿಕೃತವಾಗಿ ಈ ಪಾರ್ಟಿ ಆಯೋಜಿಸಿ ಯುವಕ-ಯುವತಿಯರನ್ನು ಸಾಮಾಜಿಕ ಜಾಲತಾಣದ ಮೂಲಕ ಆಹ್ವಾನಿಸಲಾಗಿತ್ತು. ಆನ್‌ಲೈನ್‌ನಲ್ಲೇ ಹಣ ಕಟ್ಟಿಸಿಕೊಂಡು ಸುಮಾರು 30ಕ್ಕೂ ಹೆಚ್ಚು ಜೋಡಿಗಳು ಇದರಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದ್ದು, ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ.
ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಮಾದಕ ವಸ್ತುಗಳನ್ನು ಸೇವಿಸಿ ನಶೆಯಲ್ಲಿ ತೇಲಾಡುತ್ತಿದ್ದರು ಎನ್ನಲಾಗಿದೆ. ಜಮೀನಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ 15ಕ್ಕೂ ಹೆಚ್ಚು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಜಾಮೀನಿನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು ಎಂದು ಹೇಳಲಾಗುತ್ತಿದ್ದು, ಮದ್ಯದ ಬಾಟಲಿಗಳು, ತರಾವರಿ ಭೋಜನ ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪಾರ್ಟಿಗಾಗಿ ವಿದೇಶದಿಂದಲೂ ಕೆಲವು ಡಿಜೆಗಳನ್ನು ಕರೆಸಲಾಗಿತ್ತು. ಜೋರು ಧ್ವನಿಯನ್ನು ಆಲಿಸಿದ ಅಕ್ಕಪಕ್ಕದ ಗ್ರಾಮಸ್ಥರು ಪೊಲೀಸರಿಗೆ ವಿಷಯ ಮುಟ್ಟಿಸಿದ ನಂತರ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇಲವಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಸುಮಾರು 50 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ನಿನ್ನೆ ತಡರಾತ್ರಿ ಪಾರ್ಟಿ ಆರಂಭವಾಗಿತ್ತು. ಡಿಜೆ ಮೂಲಕ ಅಬ್ಬರದ ಸಂಗೀತ ಏರ್ಪಡಿಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪಾರ್ಟಿಯಲ್ಲಿ 150ಕ್ಕೂ ಹೆಚ್ಚು ಯುವಕ, ಯುವತಿಯರು ಭಾಗಿಯಾಗಿದ್ದರು ಎಂಬ ಮಾಹಿತಿ ದೊರೆತಿದೆ. ಅಲ್ಲದೇ, ಪಾರ್ಟಿಗೆ ಇಸ್ರೇಲ್ನಿಂದ ರ್ಯಾಪರ್ ಗ್ರೇನ್ ರಿಪ್ಪರ್ ಬಂದಿದ್ದನು ಎನ್ನಲಾಗಿದೆ. ಆಯೋಜಕರು ಪಾರ್ಟಿಗೆ ಒಬ್ಬರಿಗೆ 2 ಸಾವಿರ ರೂ. ನಿಗದಿ ಮಾಡಿದ್ದರು ಎಂದು ಹೇಳಲಾಗಿದೆ.
ರೇವ್ ಪಾರ್ಟಿ ಕುರಿತು ಎಸ್ ಪಿ ಸ್ಪಷ್ಟನೆ
ರೇವ್ ಪಾರ್ಟಿ ನಡೆದಿರುವುದು ನಿಜವೆಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ. ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಹೆಚ್ಚುವರಿ ಎಸ್ಪಿ ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಸುಮಾರು 50 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ನಿನ್ನೆ ತಡರಾತ್ರಿ ಪಾರ್ಟಿ ಆರಂಭವಾಗಿತ್ತು. ಡಿಜೆ ಮೂಲಕ ಅಬ್ಬರದ ಸಂಗೀತ ಏರ್ಪಡಿಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಹೆಚ್ಚುವರಿ ಎಸ್ಪಿ ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಪಾರ್ಟಿ ಜಾಗದಲ್ಲಿ ಹಾಗೂ ವಶಕ್ಕೆ ಪಡೆದವರ ಬಳಿ ಮಾದಕ ವಸ್ತುಗಳು ಕಂಡುಬಂದಿಲ್ಲ. ಈಗಲೂ ಶೋಧ ಕಾರ್ಯ ಮುಂದುವರಿಸಿದ್ದೇವೆ. ಬಂಧಿತರ ರಕ್ತ ಪರೀಕ್ಷೆ ಮಾಡಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದೇವೆ. ವಿದೇಶಿಯರು ಪಾಲ್ಗೊಂಡ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ. ಯಾರು ಪಾರ್ಟಿ ಆಯೋಜಿಸಿದ್ದರು, ಹೇಗೆ ಆಯೋಜಿಸಿದ್ದರು, ಮಾದಕ ವಸ್ತು ಬಳಸಿದ್ದರೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಮೈಸೂರು ಎಸ್‌ಪಿ ವಿಷ್ಣುವರ್ಧನ್ ಹೇಳಿದ್ದಾರೆ.
Advertisement