ಹಂದಿ ವಿವಾದ: 'ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ': JDS ಸರಣಿ ಆರೋಪ

ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ ಎಂದು ಕರೆದಿರುವ ಜೆಡಿಎಸ್, ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ.
Lokayukta ADGP M. Chandrasekhar-HD Kumaraswamy
ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಮತ್ತು ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಮಾಜಿ ಸಿಎಂ ಹಾಗೂ ಹಾಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ 'ಹಂದಿ' ಹೇಳಿಕೆ ನೀಡಿದ್ದ ಲೋಕಾಯುಕ್ತ ಎಸ್​ಐಟಿ ಎಡಿಜಿಪಿ, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರ ವಿರುದ್ಧ ಜ್ಯಾತ್ಯಾತೀತ ಜನತಾದಳ (JDS) ಸರಣಿ ಆರೋಪಗಳನ್ನೇ ಮಾಡಿದೆ.

ಹೌದು.. ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ ಎಂದು ಕರೆದಿರುವ ಜೆಡಿಎಸ್, ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಿನಲ್ಲಿ ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡವನ್ನು ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ ತಿಳಿಸುವಿರಾ? ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಬೇಕಲ್ಲವೇ..? ಎಂದು ಗಂಭೀರ ಆರೋಪ ಮಾಡಿದೆ.

Lokayukta ADGP M. Chandrasekhar-HD Kumaraswamy
ರಾಜಭವನ ಸಿಬ್ಬಂದಿ ತನಿಖೆ: ಅನುಮತಿ ಕೋರಿದ್ದ ಐಜಿಪಿ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಎಕ್ಸ್ ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, 'ಕೇಂದ್ರ ಸಚಿವರ ಕುರಿತು ಕೀಳುಮಟ್ಟದ ಪದ ಬಳಸಿರುವುದು ಅಕ್ಷಮ್ಯ. ಎಂ.ಚಂದ್ರಶೇಖರ್ ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ? ಭೂವ್ಯವಹಾರವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ. ಈ ಸಂಬಂಧ ನಿಮ್ಮ ವಿರುದ್ಧ ಇನ್ಸ್​ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ. ಬಹುಮಹಡಿ ವಾಣಿಜ್ಯ ಕಟ್ಟಡ ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಲ್ಲಿ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡ. ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡ. ಕೆರೆ ಒತ್ತುವರಿ ಮಾಡಿಕೊಂಡ ಅಕ್ರಮಗಳ ಬಗ್ಗೆ ತನಿಖೆ ನಡೆಯಬೇಕಲ್ಲವೇ? ಎಂದು ಗಂಭೀರ ಆರೋಪ ಮಾಡಿದೆ.

ಕುಮಾರಸ್ವಾಮಿಯನ್ನು ಹಂದಿಗೆ ಹೋಲಿಕೆ ಮಾಡಿದ್ದಕ್ಕೆ ಐಪಿಎಸ್​ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್​ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ಕಳ್ಳನ ಮನಸ್ಸು ಹುಳ್ಳಳ್ಳಗೆ . ಎಂ.ಚಂದ್ರಶೇಖರ್​ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ. ಕಾನೂನಿನಡಿಯಲ್ಲಿ ನೀವು ಉತ್ತರ ನೀಡಬಹುದಿತ್ತು. ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಹತಾಶೆ. ಸಿಟ್ಟು, ಆಕ್ರೋಶದಿಂದ ಕೀಳುಮಟ್ಟದ ಪದಗಳನ್ನು ಬಳಸಿ ಉತ್ತರಿಸಿದ್ದೀರಿ. ನಿಮ್ಮ ಭ್ರಷ್ಟಾಚಾರ ದಾಖಲೆ ಸಮೇತ ಬಯಲು ಮಾಡಿದ್ದು ಅಪರಾಧವೇ? ಎಂದು ಪ್ರಶ್ನಿಸಿದೆ.

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿಯಾಗಿರುವ ಎಂ.ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ. ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು. ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ. ಹಲವು ಅಪರಾಧ ಮಾಡಿರುವ ಇಂತಹ ಕಳಂಕಿತ ಅಧಿಕಾರಿಗಳಿಂದ ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ತನಿಖೆ ಅಸಾಧ್ಯ. ಕೀಳುಮಟ್ಟದ ಪದ ಬಳಸಿರುವ ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರೇ ಅವರ ವಿರುದ್ಧ ಕ್ರಮ ಕೈಗೊಳ್ಳಿ. ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆಯೂ ಸರ್ಕಾರ ತನಿಖೆ ನಡೆಸಬೇಕು/ ಕೇಂದ್ರ ಗೃಹ ಸಚಿವಾಲಯ ಈ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಟ್ವೀಟ್ ಮೂಲಕ ಜೆಡಿಎಸ್​ ಘಟಕ ಆಗ್ರಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com