ಬೆಳಗಾವಿ: ಬೆಳಗಾವಿಯ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು 30 ವರ್ಷದ ಯಲ್ಲವ್ವ ಕರಿಹೊಳ, ಮಕ್ಕಳಾದ 5 ವರ್ಷದ ಸಾತ್ವಿಕ್, ಒಂದು ವರ್ಷದ ಮುತ್ತಪ್ಪ ಎಂದು ಗುರುತಿಸಲಾಗಿದೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗ್ಗೆಯಷ್ಟೇ ಯಲ್ಲವ್ವ ಹಾಗೂ ಆಕೆಯ ಗಂಡನ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದು ಯಲ್ಲವ್ವ ಮಕ್ಕಳ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement