ಮುಡಾ ಪ್ರಕರಣ: ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನನ್ನ ವಿರುದ್ಧ ಇ.ಡಿ ಗೂ ದೂರು ನೀಡಲಾಗಿದೆ. ಈ ರೀತಿ ದೂರು ಯಾರು ಬೇಕಾದರೂ ನೀಡಬಹುದು. ಆದರೆ ಕಾನೂನು ಏನು ಹೇಳುತ್ತದೆ ಹಾಗೆ ನಡೆದುಕೊಳ್ಳಬೇಕಾಗುತ್ತದೆ. ನನ್ನ ವಿಚಾರದಲ್ಲೂ ಕಾನೂನು ರೀತಿ ಕ್ರಮ ಆಗುತ್ತದೆ
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ಅದರಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನನ್ನ ವಿರುದ್ಧ ಇ.ಡಿ ಗೂ ದೂರು ನೀಡಲಾಗಿದೆ. ಈ ರೀತಿ ದೂರು ಯಾರು ಬೇಕಾದರೂ ನೀಡಬಹುದು. ಆದರೆ ಕಾನೂನು ಏನು ಹೇಳುತ್ತದೆ ಹಾಗೆ ನಡೆದುಕೊಳ್ಳಬೇಕಾಗುತ್ತದೆ. ನನ್ನ ವಿಚಾರದಲ್ಲೂ ಕಾನೂನು ರೀತಿ ಕ್ರಮ ಆಗುತ್ತದೆ ಎಂದರು.

ಅಧಿಕಾರಿಗಳ ವಿರುದ್ಧ ಟೀಕೆ ಸರಿಯಲ್ಲ: ಕುಮಾರಸ್ವಾಮಿ ಅವರು ಲೋಕಾಯುಕ್ತ ಎಡಿಜಿಪಿ ಮೇಲೆ ಟೀಕೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ
ಹಂದಿ ವಿವಾದ: 'ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ': JDS ಸರಣಿ ಆರೋಪ

ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಅಕ್ಟೋಬರ್ 2 ರಂದು ದಸರಾ ಸಿದ್ದತೆ ಗಳ ವೀಕ್ಷಣೆ: ದಸರಾ ಉತ್ಸವಗಳ ಸಿದ್ದತೆಗಳಿಗೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸಿದ್ಧತೆಗಳನ್ನು ವೀಕ್ಷಿಸಲು ಅಕ್ಟೋಬರ್ 2 ರಂದು ಮೈಸೂರಿಗೆ ಆಗಮಿಸಲಿದ್ದೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com