ಮೈಸೂರು: ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ನಿರ್ಬಂಧದ ಹೊರತಾಗಿಯೂ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡಲಾಗಿದೆ.
ಮಹಿಷ ದಸರಾ ಸಮಿತಿಯ ಸದಸ್ಯರು ನಗರದ ಪುರಭವನದಲ್ಲಿ ಮಹಿಷನ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಹಿಷ ದಸರಾಗೆ ಚಾಲನೆ ನೀಡಲಾಗಿದೆ.
ನಿಷೇಧಾಜ್ಞೆ ಹಿನ್ನೆಲೆಯಲ್ಲಿ 5ಕ್ಕಿಂತ ಹೆಚ್ಚು ಜನರು ಸೇರಲು ನಿರ್ಬಂಧ ವಿಧಿಸಿರುವುದನ್ನು ವಿರೋಧಿಸಿ ಸಮಿತಿಯ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆದರೆ ನಿಷೇಧಾಜ್ಞೆ ಹೊರತಾಗಿಯೂ ಪುರಭವನದಲ್ಲಿ ಚಾಲನೆ ನೀಡಲಾಗಿದೆ.
ಮೈಸೂರಲ್ಲಿ ಮಹಿಷ ಆಚರಣೆಗೆ ವಿಧಿಸಿದ್ದ ನಿಷೇಧಾಜ್ಞೆಯನ್ನು ಈ ಮೂಲಕ ಪೊಲೀಸರೇ ಮುಂದೆ ನಿಂತು ಉಲ್ಲಂಘನೆಯಾಗುವುದಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಚಾಮುಂಡಿ ಬೆಟ್ಟದಲ್ಲಿ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲು ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ. ಟೌನ್ ಹಾಲ್ ಹೊರತುಪಡಿಸಿ ಮೈಸೂರಲ್ಲಿ ಮಹಿಷ ಆಚರಣೆಗೆ ನಿಷೇಧಜ್ಞೆ ಹೇರಲಾಗಿತ್ತು.
Advertisement