ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು

ಯಲಹಂಕದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಟಾಟಾ ಇನ್ಸ್​ಸ್ಟಿಟ್ಯೂಟ್ ಮುಂಭಾಗದಲ್ಲಿ ನಡೆದಿದೆ.

ಯಲಹಂಕದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಕಾರು ಟಚ್ ಆಗಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾನೆ, ಈ ವೇಳೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್​ನ ಹಿಂದಿನ ಚಕ್ರ ಆತನ ತಲೆ ಮೇಲೆ ಮೇಲೆ ಹರಿದಿದೆ. ಪರಿಣಾಮ ಫುಲ್ ಹೆಲ್ಮೆಟ್ ಧರಿಸಿದ್ದರೂ ಆತನ ಜೀವ ಉಳಿದಿಲ್ಲ.

ಮೃತ ವ್ಯಕ್ತಿಯನ್ನು ಈಶ್ವರ್(43) ಎಂದು ಗುರುತಿಸಲಾಗಿದ್ದು, ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಕಾರ್ಕಳ: ಲಾರಿ-ಬೈಕ್ ನಡುವೆ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು!

ಮೃತ ವ್ಯಕ್ತಿ ಈಶ್ವರ್​ ವಿದ್ಯಾರಣ್ಯಪುರ ನಿವಾಸಿಯಾಗಿದ್ದು, ಚಿನ್ನ, ಬೆಳ್ಳಿಯ ವ್ಯಾಪಾರ ಮಾಡುತ್ತಿದ್ದರು. ಇಬ್ಬರು ಗಂಡು ಮಕ್ಕಳು ಹೆಂಡತಿಯೊಂದಿಗೆ ವಾಸವಾಗಿದ್ದರು. ಒಬ್ಬ ಮಗನಿಗೆ 13 ವರ್ಷ ಮತ್ತೊಬ್ಬನಿಗೆ 10 ವರ್ಷ.

ಸದ್ಯ ಈಶ್ವರ್ ಮೃತದೇಹ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಶವಗಾರದಲ್ಲಿದೆ. ಪೋಸ್ಟ್ ಮಾರ್ಟಂ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.

ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com