
ಉಡುಪಿ: ಮಿನಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಕಾರ್ಕಳ- ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಸುರೇಶ್ ಆಚಾರ್ಯ (36) ಸಮೀಕ್ಷಾ (7) ಸುಶ್ಮೀತಾ (5) ಸುಶಾಂತ್ (2) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಪ್ರಯಾಣಿಸುತ್ತಿದ್ದಾಗ ಮಿನಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಧ್ಯಾಹ್ನ 3-05 ರಿಂದ 4 ಗಂಟೆ ಸುಮಾರಿನಲ್ಲಿ ಅಪಘಾತ ಸಂಭವಿಸಿದೆ. ಬಾಜಗೋಲಿ ಕಡೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಲಾರಿ, ವೆನೂರ್ ನಿಂದ ನಲ್ಲೂರ್ ಕಡೆಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುರೇಶ್ ಅಚಾರ್ಯ ಅವರ ಪತ್ನಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಾರಿಯ ಅತಿ ವೇಗದ ಚಾಲನೆ, ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸುರೇಶ್ ಹಾಗೂ ಅವರ ಇಬ್ಬರು ಮಕ್ಕಳಾದ ಸುಮೀಕ್ಷಾ, ಸುಶಾಂತ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಸುಷ್ಮಿತಾ ಕಾರ್ಕಳದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಹೇಮಂತ್ ನನ್ನು ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
Advertisement