ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೈಯಪ್ಪನಹಳ್ಳಿ, ಐಒಸಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ಬೆಂಗಳೂರಿನ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ಮತ್ತು ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹೆಚ್ಚುವರಿ ದ್ವಿಪಥದ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.

ಬೆಂಗಳೂರು: ಬೆಂಗಳೂರಿನ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ಮತ್ತು ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹೆಚ್ಚುವರಿ ದ್ವಿಪಥದ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.

ಅಂದಾಜು 263 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಎರಡು ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಬೆಂಗಳೂರು ನಗರದ ರಸ್ತೆಗಳ ವೈಟ್‌ಟಾಪ್‌ಗೆ 1,200 ಕೋಟಿ ರೂಪಾಯಿ ನೀಡಲು ಅನುಮೋದನೆ ನೀಡಲಾದೆ ಎಂದರು.

ಬಿಬಿಎಂಪಿ ವ್ಯಾಪ್ತಿಗೆ ಹೊಸ ಸೇರ್ಪಡೆಗೊಂಡಿರುವ 110 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಗ್ರಾಮಗಳನ್ನು 2006ರಲ್ಲಿಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಲಾಗಿತ್ತು ಎಂದರು.

ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜ್, ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣಕ್ಕೆ ಪರಿಷ್ಕೃತ ಅಂದಾಜು ಮೊತ್ತ 499 ಕೋಟಿ ರೂ. ನೀಡಲು ಇಂದು ಸಂಪುಟ ಸಭೆಯ ಅನುಮೋದನೆ ಸಿಕ್ಕಿದೆ ಎಂದರು.

ಹಾಗೆಯೇ ಚಿಕ್ಕಬಳ್ಳಾಪುರ ನಂದಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ 810 ಕೋಟಿ ರೂ., ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ 416 ಕೋಟಿ ರೂ. ಮತ್ತು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ 455 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೂ ಸಂಪುಟ ಒಪ್ಪಿಗೆ ನೀಡಿದೆ.

ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು, 31-12-2023ಕ್ಕೆ ಡೀಫಾಲ್ಟ್ ಆಗಿರುವ ಮಧ್ಯಮಾವಧಿ, ದೀರ್ಘಾವಧಿ ಸಾಲದ ಮೇಲಿನ 440.20 ಕೋಟಿ ಮೌಲ್ಯದ ಬಡ್ಡಿ ಮನ್ನಾ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

Related Stories

No stories found.

Advertisement

X
Kannada Prabha
www.kannadaprabha.com