ಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಕಾರು, ಮೂವರು ಸಾವು: ಧರ್ಮಸ್ಥಳಕ್ಕೆ ಹೊರಟ ಬಸ್ ಅಪಘಾತ: ಓರ್ವ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಶಾಲಾ ಕಾಂಪೌಂಡ್‌ ಹಾಗೂ ಮನೆಗೆ ಬಸ್​ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ನಡೆದಿದೆ. ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ದುರ್ದೈವಿ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು/ಧರ್ಮಸ್ಥಳ/ಮಂಡ್ಯ: ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಶಾಲಾ ಕಾಂಪೌಂಡ್‌ ಹಾಗೂ ಮನೆಗೆ ಬಸ್​ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ನಡೆದಿದೆ. ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ದುರ್ದೈವಿ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಕಲೇಶಪುರದ ಬಾಗೆ ಗ್ರಾಮಕ್ಕೆ ತಲುಪುತ್ತಿದ್ದಂತೆ ಬಸ್‌ನ ಆಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಮನೆಗೆ ಡಿಕ್ಕಿಹೊಡೆದು, ಜೆಎಸ್ಎಸ್ ಶಾಲೆಯ ಕಾಂಪೌಂಡ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. 

ಪರಿಣಾಮ ಶಾಲೆಯ ಕಾಂಪೌಂಡ್‌ ಹಾಗೂ ಮನೆಗೆ ಬಸ್ ಡಿಕ್ಕಿ ಹೊಡೆದು ಬಸ್‌ನಲ್ಲಿದ್ದ ಪ್ರಯಾಣಿಕ ಅಮೃತ್‌ರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮೀನಿನಲ್ಲಿದ್ದ ಮನೆಗೂ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಹಳ್ಳಕ್ಕೆ ಬಿದ್ದು ಮೂವರು ಸಾವು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30ವ), ಪವನ್ ಶೆಟ್ಟಿ (32ವ) ಹಾಗೂ ಚಿರಂಜೀವಿ (32ವ) ಮೃತಪಟ್ಟವರಾಗಿದ್ದು, ಘಟನೆಯಲ್ಲಿ ಸಾಗರ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಡಿಕ್ಕಿಯಾಗಿ ಬೈಕ್​ ಸವಾರ ದುರ್ಮರಣ: ಲಾರಿ ಡಿಕ್ಕಿಯಾಗಿ ಬೈಕ್​ ಸವಾರ ದುರ್ಮರಣ ಹೊಂದಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಜಲಕರ್ಟಿ-ಲಡ್ಪಾಪುರ ಮಧ್ಯೆ ನಡೆದಿದೆ. ವಾಡಿ ಪಟ್ಟಣದ ಜಾಂಬವೀರ ಕಾಲೋನಿ ನಿವಾಸಿ ಸೂರ್ಯಕಾಂತ ಮುಂಡರಗಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಯಾದಗಿರಿದಿಂದ ವಾಡಿಗೆ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com