ಬೆಂಗಳೂರು: ಹಾಲಿನ ಸಬ್ಸಿಡಿ ಬಿಡುಗಡೆಗೆ ಒತ್ತಾಯಿಸಿ ಗೋವುಗಳೊಂದಿಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದರು.
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದರು.

ಇಂದು ತಮ್ಮ ಗೋವುಗಳೊಂದಿಗೆ ನಗರದ ಫ್ರೀಡಂ ಪಾರ್ಕ್ ಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಅನ್ನದಾತರಿಗೆ ಟೋಪಿ ಹಾಕಿರುವ ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೇವಲ ಜನತೆಗೆ ಮಾತ್ರವಲ್ಲ, ಜಾನುವಾರುಗಳಿಗೂ ಶಾಕ್‌ ನೀಡುತ್ತದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ಹೆಚ್ಚಳ, ಹಸು-ಎಮ್ಮೆ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಎಂಬಿತ್ಯಾದಿ ಕಲರ್‌ ಕಲರ್‌ ಹೂವುಗಳನ್ನು ಕಿವಿ ಮೇಲೆ ಇಟ್ಟು ಅಧಿಕಾರಕ್ಕೆ ಬಂದು, ಈಗ ಸಾಲವನ್ನು ನೀಡುತ್ತಿಲ್ಲ, ಸಬ್ಸಿಡಿಯನ್ನೂ ಹೆಚ್ಚಿಸುತ್ತಿಲ್ಲ ಎಂದು ಬಿಜೆಪಿ ನಾಯಕರು ಕಿಡಿಕಾರಿದರು. 

ಈಗ ರೈತರಿಗೆ ಹಾಲಿನ ಸಬ್ಸಿಡಿಯಾಗಿ 716 ಕೋಟಿ ರೂಪಾಯಿ ನೀಡಬೇಕಿದ್ದು. ಆ ಬಾಕಿ ಹಣವನ್ನೂ ನೀಡದೆ ಹಾಗೇ ಉಳಿಸಿಕೊಂಡಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇದರ ಪರಿಣಾಮ ರಾಜ್ಯದಲ್ಲಿ ಹಾಲಿನ ಉತ್ಪಾದನೆಯು ಭಾರಿ ಪ್ರಮಾಣದಲ್ಲಿ ಕುಂಠಿತವಾಗಿದೆ. ಜನತೆಯ ಜತೆ ಜಾನುವಾರುಗಳ ಶಾಪವೂ ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ತಟ್ಟುತ್ತದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com