ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್
ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್

ಆಸ್ಪತ್ರೆಯಲ್ಲಿ ಪ್ರೀ-ವೆಡ್ಡಿಂಗ್ ಫೋಟೋ ಶೂಟ್‌: ಸೇವೆಯಿಂದ ವೈದ್ಯ ವಜಾ

ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ತಾಲೂಕಿನ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಶಸ್ತ್ರಚಿಕಿತ್ಸಾ ಘಟಕ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೊರಗುತ್ತಿಗೆ ವೈದ್ಯ ಡಾ. ಅಬಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶಿಸಿದ್ದಾರೆ.
Published on

ಚಿತ್ರದುರ್ಗ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ತಾಲೂಕಿನ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಶಸ್ತ್ರಚಿಕಿತ್ಸಾ ಘಟಕ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೊರಗುತ್ತಿಗೆ ವೈದ್ಯ ಡಾ. ಅಬಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯ ಡಾ. ಅಭಿಷೇಕ್ ಅವರು ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಕಳೆದ ಫೆ 07 ರಂದು ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿದ್ದರು. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಲ್ಲದೆ, ಈ ಕುರಿತ ಸುದ್ದಿ ಮಾಧ್ಯಮಗಳಲ್ಲಿಯೂ ವರದಿ ಬಿತ್ತರವಾಗಿತ್ತು.

ಇಂತಹ ಕಾರ್ಯವು ನಿಯಮ ಬಾಹಿರವಾಗಿದ್ದು, ವೈದ್ಯರು ಕರ್ತವ್ಯ ಲೋಪವೆಸಗಿರುತ್ತಾರೆ. ಹೀಗಾಗಿ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ವರದಿಯನ್ವಯ ಡಾ. ಅಭಿಷೇಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ತಿಳಿಸಿದ್ದಾರೆ.

ಏನಿದು ಪ್ರಕರಣ?
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ. ಅಭಿಷೇಕ್ ಫೋಟೋಶೂಟ್ ಮಾಡಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದರು. ತಾಲ್ಲೂಕಿನ ಭರಮಸಾಗರ ಹೋಬಳಿಯ ಡಾ. ಅಭಿಷೇಕ್ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಆಸ್ಪತ್ರೆಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು.

ಆಸ್ಪತ್ರೆಯಲ್ಲಿ ಒಬ್ಬ ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಧು-ವರ ವಿಡಿಯೋ ಶೂಟ್ ಮಾಡಿಸಿದ್ದಾರೆ. ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ಫೋಟೋಶೂಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com