ಸಂಗ್ರಹ ಚಿತ್ರ
ರಾಜ್ಯ
ಬೆಂಗಳೂರು: ಲಾರಿ ಹರಿದು ಕಾರ್ಮಿಕ ದಂಪತಿಯ ಮಗು ಸ್ಥಳದಲ್ಲೇ ಸಾವು
ಹಾಲೋ ಬ್ಲಾಕ್ ಇಟ್ಟಿಗೆ ಕಾರ್ಖಾನೆಯಲ್ಲಿ ಆಟವಾಡುತ್ತಿದ್ದ ಕಾರ್ಮಿಕ ದಂಪತಿಯ ಒಂದೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣೆ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಬೆಂಗಳೂರು: ಹಾಲೋ ಬ್ಲಾಕ್ ಇಟ್ಟಿಗೆ ಕಾರ್ಖಾನೆಯಲ್ಲಿ ಆಟವಾಡುತ್ತಿದ್ದ ಕಾರ್ಮಿಕ ದಂಪತಿಯ ಒಂದೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣೆ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ರಾಯಚೂರು ಮೂಲದ ಮಾಳಪ್ಪ ಮತ್ತು ಚಂದ್ರಕಲಾ ದಂಪತಿ ಪುತ್ರಿ ಸಪ್ತಾ ಮೃತ ಮಗು. ಕೊಪ್ಪ-ಬೇಗೂರು ರಸ್ತೆಯಲ್ಲಿ ಇರುವ ಹಾಲೋ ಬ್ಲಾಕ್ ಇಟ್ಟಿಕೆ ತಯಾರಿಸುವ ಕಾರ್ಖಾನೆಯಲ್ಲಿ ಮಂಗಳವಾರು ಬೆಳಗ್ಗೆ 8.45ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಕಾರ್ಖಾನೆಯಲ್ಲಿ ದಂಪತಿಗಳು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಮಗುವನ್ನು ಆಟವಾಡಲು ಬಿಟ್ಟು, ಕೆಲಸದತ್ತ ಗಮನ ಹರಿಸಿದ್ದರು. ಇದೇ ಸಮಯಕ್ಕೆ ಇಟ್ಟಿಗೆ ಲೋಡ್ ಮಾಡಿಕೊಂಡು ಹೋಗಲು ಬಂದಿದ್ದ ಲಾರಿ ಚಾಲಕ ಮಗುವನ್ನು ಗಮನಿಸದೆ ಚಾಲನೆ ಮಾಡಿದ್ದಾನೆ. ಈ ವೇಳೆ ಚಕ್ರ ಮಗುವಿನ ಮೇಲೆ ಉರುಳಿದ್ದು, ಸ್ಥಳದಲ್ಲೇ ಮೃತಪಟ್ಟಿದೆ. ಈ ಸಂಬಂಧ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿ. ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ