ಶ್ರೀಕಾಂತ ಪೂಜಾರಿ ಸೇರಿ ಒಟ್ಟು 36 ಜನರ ಬಂಧನ: ಪಟ್ಟಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ  ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ  ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಶ್ರೀಕಾಂತ್ ಪೂಜಾರಿ ವಿರುದ್ಧ ದಾಖಲಾಗಿರುವ, 16 ಪ್ರಕರಣಗಳು ಹಾಗೂ ಎಲ್ಲಾ ಪ್ರಕರಣಗಳ ವಿವರಣೆಯುಳ್ಳ ಪಟ್ಟಿಯನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. 

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದಿದ್ದಾರೆ. 

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಒತ್ತಾಯಿಸಿದ್ದಾರೆ. 

ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಎಂದು ಕೇಳಿದ್ದಾರೆ. 

ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ. ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ?  ಎಂದು ಪ್ರಶ್ನಿಸಿದ್ದಾರೆ. 

ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com