ಪಿಎಂ ಕುಸುಮ್-ಸಿ ಯೋಜನೆ ಅನುಷ್ಠಾನ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯದ ರೈತರ ವಿದ್ಯುತ್ ಬೇಡಿಕೆಗಳನ್ನು ಪೂರೈಸಲು ಪಿಎಂ-ಕುಸುಮ್-ಸಿ...
ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಭೆ
ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯದ ರೈತರ ವಿದ್ಯುತ್ ಬೇಡಿಕೆಗಳನ್ನು ಪೂರೈಸಲು ಪಿಎಂ-ಕುಸುಮ್-ಸಿ ಯೋಜನೆಯಡಿ ನೀರಾವರಿ ಪಂಪ್ ಸೆಟ್‌ಗಳ ಸೋಲಾರೈಸೇಶನ್ ಕುರಿತು ಚರ್ಚಿಸಿದರು.

PM-KUSUM-C ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ(MNRE) ಯೋಜನೆಯಾಗಿದ್ದು, ಅಸ್ತಿತ್ವದಲ್ಲಿರುವ ಗ್ರಿಡ್ ಸಂಪರ್ಕಿತ ಕೃಷಿ ಪಂಪ್‌ ಸೆಟ್ ಗಳಿಗೆ ಸೋಲಾರ್ ಅಳವಡಿಸುವ ಗುರಿ ಹೊಂದಿದೆ.

ಅಧಿಕೃತ ಹೇಳಿಕೆಯ ಪ್ರಕಾರ, ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಫೀಡರ್ ಸೋಲಾರೈಸೇಶನ್ ಯೋಜನೆಯನ್ನು ಅನುಷ್ಠಾನಗೊಳಿಸಲು ಇಂಧನ ಇಲಾಖೆಗೆ ವಿದ್ಯುತ್ ಸಬ್‌ಸ್ಟೇಷನ್‌ಗಳ ಸಮೀಪವಿರುವ ಸರ್ಕಾರಿ ಭೂಮಿಯನ್ನು ಗುತ್ತಿಗೆ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡುವ ಬಗ್ಗೆ ಚರ್ಚಿಸಲಾಗಿದೆ.

ಸಭೆಯ ನಂತರ ಸಚಿವ ಜಾರ್ಜ್ ಅವರು, 2023-24ನೇ ಸಾಲಿನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್‌ನಿಂದ ಮೂರು ಕೋಟಿ ರೂಪಾಯಿಗಳ ಚೆಕ್ ಅನ್ನು ಹಸ್ತಾಂತರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com