ರಾಜ್ಯದಲ್ಲಿ ಇಂದು ಕೊರೋನಾದಿಂದ ಒಬ್ಬರು ಸಾವು, 260 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು 260 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು 260 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1175ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 260 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಕೊಪ್ಪಳ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,175ಕ್ಕೆ ಏರಿಕೆಯಾಗಿದೆ. 

ಇಂದು ಕೋವಿಡ್ ನಿಂದ 228 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,497 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.46 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿಯೇ 134 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನುಳಿದಂತೆ ಬಾಗಲಕೋಟೆ 4, ಬಳ್ಳಾರಿ 2, ಬೆಂಂಗಳೂರು ಗ್ರಾಮಾಂತರ 20, ಚಾಮರಾಜನಗರ 4, ಚಿಕ್ಕಬಳ್ಳಾಪುರ 4, ಚಿತ್ರದುರ್ಗದಲ್ಲಿ ಎರಡು, ದಕ್ಷಿಣ ಕನ್ನಡ 9, ದಾವಣಗೆರೆ 3, ಧಾರವಾಡ 9, ಗದಗ 1, ಹಾಸನ 2, ಕೋಲಾರ 1, ಕೊಪ್ಪಳ 1, ಮಂಡ್ಯ 8, ಮೈಸೂರು 24, ರಾಯಚೂರು 1, ರಾಮನಗರ 7,  ಶಿವಮೊಗ್ಗ 11, ತುಮಕೂರು 6, ಉತ್ತರ ಕನ್ನಡ 4 ಹಾಗೂ ವಿಜಯನಗರ ಜಿಲ್ಲೆಯಲ್ಲಿ ಇಂದು 3 ಕೊವಿಡ್​ ಕೇಸ್​ ಪತ್ತೆಯಾಗಿದೆ. ಜೊತೆಗೆ ಇವರಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com