ಕರಸೇವಕ ಶ್ರೀಕಾಂತ್ ಪೂಜಾರಿ ಬಂಧಿಸಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ ಶಿಕ್ಷೆ!

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ.
ಕರಸೇವಕ ಶ್ರೀಕಾಂತ್ ಪೂಜಾರಿ
ಕರಸೇವಕ ಶ್ರೀಕಾಂತ್ ಪೂಜಾರಿ
Updated on

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ.

ಶ್ರೀಕಾಂತ್‌ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಮಹಮದ್ ರಫೀಕ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದ್ದು, ಅವರ ಜಾಗಕ್ಕೆ ಪ್ರಭಾರಿ ಇನ್ಸ್‌ಪೆಕ್ಟರ್‌ ಆಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರಿ ಠಾಣಾಧಿಕಾರಿಯಾಗಿ ಹೆಚ್ಚುವರಿ ಅಧಿಕಾರ ನೀಡಿದ್ದಾರೆ.

ಡಿ. 29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ನಿನ್ನೆ ರಾಜ್ಯಪಾಲರಿಗೂ ದೂರು ನೀಡಿದ್ದಾರೆ.

ಹಳೇಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ  ಯಾವುದೇ ರಾಜಕೀಯ ಇಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಆದರೂ ಠಾಣೆಯ ಇನ್ಸ್‌ಪೆಕ್ಟರ್‌ ರಫೀಕ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸುವ ಅಗತ್ಯ ಕುರಿತು ಹಲವು ಅನುಮಾನಗಳು ಮೂಡತೊಡಗಿವೆ.

ಸರ್ಕಾರ ಕಾನೂನು ಪ್ರಕಾರವೇ ನಡೆದುಕೊಂಡಿದ್ದರೆ ಪ್ರಭಾರಿಯನ್ನು ನೇಮಿಸುವ ಅಗತ್ಯವೇ ಇರಲಿಲ್ಲ. ಕಡ್ಡಾಯ ರಜೆಯ ಮೇಲೆ ಇನ್ಸ್‌ಪೆಕ್ಟರ್‌ ಅವರನ್ನು ಬಂಧಿಸಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಪರೋಕ್ಷವಾಗಿ ತಪ್ಪನ್ನು ಒಪ್ಪಿಕೊಂಡಂತೆ ಕಾಣುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com