ಉಸಿರಾಟದ ತೊಂದರೆ, ಜ್ವರ ಇರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ಐಎಲ್ಐ ಅಥವಾ ತೀವ್ರ ಉಸಿರಾಟದ ತೊಂದರೆ(ಎಸ್ಎಆರ್ಐ) ಇರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು...
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(ಸಂಗ್ರಹ ಚಿತ್ರ)
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(ಸಂಗ್ರಹ ಚಿತ್ರ)

ಬೆಂಗಳೂರು: ಐಎಲ್ಐ ಅಥವಾ ತೀವ್ರ ಉಸಿರಾಟದ ತೊಂದರೆ(ಎಸ್ಎಆರ್ಐ) ಇರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ತಿಳಿಸಿದ್ದಾರೆ.

ನಾಳೆ ಕೋವಿಡ್ ಸಹಾಯವಾಣಿಯನ್ನು ಸಹ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರತಿದಿನ 7,000 ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಮತ್ತು ಪಾಸಿಟಿವಿಟಿ ದರ ಶೇಕಡಾ 3.82 ರಷ್ಟು ಇದೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಇನ್ನೂ ತಗ್ಗಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ತಿಳಿಸಿದ್ದಾರೆ.

ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿವೆ ಎಂದ ಸಚಿವರು, ಕೋವಿಡ್ ಪಾಸಿಟಿವ್ ಇರುವವರ ಮೇಲೆ ತೀವ್ರ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಈ ಮೊದಲು 20 ILI/SARI ಪ್ರಕರಣಗಳಲ್ಲಿ ಒಂದನ್ನು ಮಾತ್ರ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತಿತ್ತು. ಆದರೆ ಇನ್ನು ಮುಂದೆ ಎಲ್ಲಾ ILI/SARI ರೋಗಿಗಳಿಗೆ ಕೋವಿಡ್ ಪರೀಕ್ಷೆ ನಡೆಸುವಂತೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com