ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಒನ್-ಮ್ಯಾನ್ ಶೋ ಆಗಿದೆ: ಸತೀಶ್ ಜಾರಕಿಹೊಳಿ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಎಲ್ಲ ರಾಜಕೀಯ ಪಕ್ಷಗಳನ್ನು ಆಹ್ವಾನಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಡೀ ಕಾರ್ಯಕ್ರಮ ಏಕವ್ಯಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದ್ದಾರೆ.
Published on

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಎಲ್ಲ ರಾಜಕೀಯ ಪಕ್ಷಗಳನ್ನು ಆಹ್ವಾನಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಡೀ ಕಾರ್ಯಕ್ರಮ ಏಕವ್ಯಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಎಲ್ಲ ರಾಜಕೀಯ ಪಕ್ಷಗಳನ್ನು ಆಹ್ವಾನಿಸಬೇಕಿತ್ತು ಎಂದರು.

ರಾಮಮಂದಿರ ಉದ್ಘಾಟನೆಗೆ ಎಲ್ಲ ರಾಜಕೀಯ ಪಕ್ಷಗಳನ್ನು ಆಹ್ವಾನಿಸಬೇಕು. ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಹೊರತುಪಡಿಸಿ ಬೇರೆ ಯಾವ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಿಲ್ಲ. ಆದರೆ, ಆಹ್ವಾನ ಬಂದರೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. 

'ಈಗ ಜನಸಂದಣಿಯಲ್ಲಿ ಹೋಗುವ ಬದಲು, ನಾನು ಬೇರೆ ಸಮಯದಲ್ಲಿ ಅಯೋಧ್ಯೆಗೆ ಭೇಟಿ ನೀಡಲು ಬಯಸುತ್ತೇನೆ. ನಾನು ನನ್ನ ಜನ್ಮಸ್ಥಳದಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.

ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಸಚಿವರು, ಜನರ ಸಂಕಷ್ಟಗಳನ್ನು ಪರಿಹರಿಸಲು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಬೇಕು. ಹಿಂದಿನ ಪ್ರಕರಣಗಳ ಆಧಾರದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಮತ್ತು ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಒಂದೆರಡು ದಿನ ಪ್ರತಿಭಟನೆ ಮಾಡ್ತಾರೆ. ನಾವೇನು ಯಾವುದನ್ನು ಸಮರ್ಥನೆ ಮಾಡುತ್ತಿಲ್ಲ. ನ್ಯಾಯಾಲಯ ಇದೆ ಅಲ್ಲಿ ತೀರ್ಮಾನ ಆಗಬೇಕು. ಪೊಲೀಸರು ಆರೋಪಿಯನ್ನು ಬಂಧನ ಮಾಡಿದರೆ, ಅದಕ್ಕೂ ಕಾಂಗ್ರೆಸ್‌ಗೂ ಏನೂ ಸಂಬಂಧ ಇಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com