ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 19 ವರ್ಷದ ಯುವತಿ ಬಲಿ!

ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಕೆಎಫ್ ಡಿ ಪಾಟಿಸಿವ್ ಬಂದಿದ್ದ ಈ ಯುವತಿಯನ್ನು ಉಡುಪಿ ಜಿಲ್ಲೆಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇದು ಈ ವರ್ಷ ಕೆಎಫ್‌ಡಿಯಿಂದ ಸಂಭವಿಸಿದ ಮೊದಲ ಸಾವು.

ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಪರೀಕ್ಷೆ ನಡೆಸಿದಾಗ ಮೊದಲ ಬಾರಿ ನೆಗಟಿವ್ ಬಂದಿತ್ತು. ನಂತರ ಎರಡನೇ ಬಾರಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ.

KFD ಒಂದು ವೈರಲ್ ಸೋಂಕು ಆಗಿದ್ದು, ಇದು ಚಿಗಟದಿಂದ ಹರಡುತ್ತದೆ ಮತ್ತು ಮನುಷ್ಯರು ಮತ್ತು ಪ್ರಾಣಿಗಳ ಮೇಲೆ ಈ ಕಾಯಿಲೆ ಪರಿಣಾಮ ಬೀರುತ್ತದೆ. ಇದು ಜ್ವರ, ತಲೆನೋವು, ರಕ್ತಸ್ರಾವದ ತೊಂದರೆಗಳು ಮತ್ತು ಕೆಲವೊಮ್ಮೆ ಸಾವಿಗೂ ಕಾರಣವಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com