ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ಸೋಂಕು ದೃಢ, 156 ಸೋಂಕಿತರು ಗುಣಮುಖ!

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ  ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ  ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 30 ಜನರಲ್ಲಿ ಸೋಂಕು ದೃಢಪಟ್ಟಿದ್ದು, 67 ಸೋಂಕಿತರು ಗುಣಮುಖರಾಗಿದ್ದಾರೆ. 707 ಪರೀಕ್ಷೆ ನಡೆಸಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 482 ಆಗಿದೆ. ಉಳಿದಂತೆ ಬೆಳಗಾವಿಯಲ್ಲಿ 5, ಮೈಸೂರಿನಲ್ಲಿ 8, ಬಳ್ಳಾರಿ, ಶಿವಮೊಗ್ಗ, ಚಾಮರಾಜನಗರದಲ್ಲಿ 2, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

ರಾಜ್ಯದಲ್ಲಿಂದು 3,123 ಪರೀಕ್ಷೆ ಮಾಡಲಾಗಿದೆ.ಈ ಪೈಕಿ 2,369 ಆರ್ ಟಿಪಿಸಿಆರ್ ಹಾಗೂ 754 RAT ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.95, ಮರಣ ಪ್ರಮಾಣ ಶೇ. 0.0 ಆಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com