ರಾಜ್ಯ

ಬ್ಯಾಂಕ್‌ ಗಳು ವ್ಯಕ್ತಿ ಪಾಸ್‌ಪೋರ್ಟ್, ಓಸಿಐ ಕಾರ್ಡ್ ಇಟ್ಟುಕೊಳ್ಳುವುದು ಕಾನೂನುಬಾಹಿರ: ಕರ್ನಾಟಕ ಹೈಕೋರ್ಟ್

ಬ್ಯಾಂಕ್‌ ಗಳು ವ್ಯಕ್ತಿ ಪಾಸ್‌ಪೋರ್ಟ್, ಓಸಿಐ ಕಾರ್ಡ್ ಇಟ್ಟುಕೊಳ್ಳುವುದು ಕಾನೂನುಬಾಹಿರ: ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Published On :

ಬೆಂಗಳೂರು: ಬ್ಯಾಂಕ್‌ ಗಳು ವ್ಯಕ್ತಿ ಪಾಸ್‌ಪೋರ್ಟ್, ಓಸಿಐ ಕಾರ್ಡ್ ಇಟ್ಟುಕೊಳ್ಳುವುದು ಕಾನೂನುಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಹೇಳಿದೆ.

ಬ್ಯಾಂಕ್‌ನಿಂದ ಯಾವುದೇ ವ್ಯಕ್ತಿಯ ಪಾಸ್‌ಪೋರ್ಟ್ ಮತ್ತು ಒಸಿಐ ಕಾರ್ಡ್ ಅನ್ನು ಉಳಿಸಿಕೊಳ್ಳುವುದು ಕಾನೂನುಬಾಹಿರ ಎಂದು ತಿಳಿಸಿದ ಕರ್ನಾಟಕ ಹೈಕೋರ್ಟ್, ವಿಡಿಬಿ ಪ್ರಾಪರ್ಟಿ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾದ ಅರ್ಜಿದಾರ ಕೋಶಿ ವರ್ಗೀಸ್‌ಗೆ ಪಾಸ್‌ಪೋರ್ಟ್ ಮತ್ತು ಓವರ್‌ಸೀಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಕಾರ್ಡ್ ಅನ್ನು ಅವರಿಗೆ ವಾಪಸ್ ಮರಳಿಸುವಂತೆ ಸೂಚಿಸಿದೆ.

ಪಾಸ್‌ಪೋರ್ಟ್ ಮತ್ತು ಒಸಿಐ ಕಾರ್ಡ್‌ಗಳನ್ನು ಬ್ಯಾಂಕ್‌ನಿಂದ ಪಡೆದು ತನಗೆ ಹಸ್ತಾಂತರಿಸಲು ನಿರ್ದೇಶನ ನೀಡುವಂತೆ ಕೋರಿ ಬ್ರಿಟನ್ ಪ್ರಜೆ ವರ್ಗೀಸ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶ ನೀಡಿದ್ದಾರೆ.

2019 ರಲ್ಲಿ ಅರ್ಜಿದಾರರ ವಿರುದ್ಧ ಅಂದಿನ ವಿಜಯಾ ಬ್ಯಾಂಕ್, (ಈಗ ಬ್ಯಾಂಕ್ ಆಫ್ ಬರೋಡಾ), ಗೃಹ ಸಾಲದ ಖಾತೆಯನ್ನು ಮುಚ್ಚುವುದಾಗಿ ಅವರು ನೀಡಿದ ಭರವಸೆಯನ್ನು ಪಾಲಿಸದಿದ್ದಕ್ಕಾಗಿ ಆರೋಪಿ ನಂ.6 ಎಂದು ಆರೋಪಿಸಿ ಪ್ರಕರಣ ದಾಖಲಿಸಿತ್ತು. ಬ್ಯಾಂಕ್‌ನ ನಿರ್ದೇಶನದಂತೆ ಅವರು ತಮ್ಮ ಪಾಸ್‌ಪೋರ್ಟ್ ಮತ್ತು ಒಸಿಐ ಕಾರ್ಡ್ ಅನ್ನು ಬ್ಯಾಂಕ್‌ಗೆ ಒಪ್ಪಿಸಿದ್ದರು. ಆದರೆ ನಂತರ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.