ಮತದಾರರ ಜಾಗೃತಿಗಾಗಿ ಬೆಂಗಳೂರಿನ ರೇಡಿಯೋ ಮಿರ್ಚಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರತಿವರ್ಷ ಮತದಾರರ ಜಾಗೃತಿಗಾಗಿ ಅತ್ಯುತ್ತಮ ಪ್ರಚಾರ ಕೈಗೊಳ್ಳುವ ಮಾಧ್ಯಮ ಸಂಸ್ಥೆಗಳಿಗೆ ನೀಡುವ 2023ನೇ ಸಾಲಿನ ರಾಷ್ಟ್ರಮಟ್ಟದ ವಿದ್ಯುನ್ಮಾನ ಮಾಧ್ಯಮ (ರೇಡಿಯೋ) ಪ್ರಶಸ್ತಿಗೆ ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್ ಎಮ್ ಭಾಜನವಾಗಿದೆ. 
ರೇಡಿಯೋ ಮಿರ್ಚಿ ಕಾರ್ಯಕ್ರಮ
ರೇಡಿಯೋ ಮಿರ್ಚಿ ಕಾರ್ಯಕ್ರಮ
Updated on

ಬೆಂಗಳೂರು: ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರತಿವರ್ಷ ಮತದಾರರ ಜಾಗೃತಿಗಾಗಿ ಅತ್ಯುತ್ತಮ ಪ್ರಚಾರ ಕೈಗೊಳ್ಳುವ ಮಾಧ್ಯಮ ಸಂಸ್ಥೆಗಳಿಗೆ ನೀಡುವ 2023ನೇ ಸಾಲಿನ ರಾಷ್ಟ್ರಮಟ್ಟದ ವಿದ್ಯುನ್ಮಾನ ಮಾಧ್ಯಮ (ರೇಡಿಯೋ) ಪ್ರಶಸ್ತಿಗೆ ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್ ಎಮ್ ಭಾಜನವಾಗಿದೆ. 

ಆಯೋಗವು ಮತದಾರರಲ್ಲಿ ಚುನಾವಣಾ ಜಾಗೃತಿ ಕುರಿತಂತೆ ಅತ್ಯುತ್ಮಮವಾಗಿ ಕಾರ್ಯನಿರ್ವಹಿಸುವ ಮಾಧ್ಯಮ ಸಂಸ್ಥೆಗಳಿಗೆ ಮುದ್ರಣ, ವಿದ್ಯುನ್ಮಾನ (ಟಿವಿ), ವಿದ್ಯುನ್ಮಾನ (ರೇಡಿಯೋ) ಸೇರಿದಂತೆ ಡಿಜಿಟಲ್ ಮಾಧ್ಯಮ (ಸಾಮಾಜಿಕ ಜಾಲತಾಣ) ಎಂದು ನಾಲ್ಕು ವರ್ಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. 

ಕರ್ನಾಟಕದಲ್ಲಿ ಕಳೆದ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023  ರ ಸಮಯದಲ್ಲಿ ಹಲವು ಮಾಧ್ಯಮ ಸಂಸ್ಥೆಗಳು ಮತದಾರರ ಜಾಗೃತಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದ್ದವು, ಬೆಂಗಳೂರಿನ ರೇಡಿಯೋ ಮಿರ್ಚಿ ಸಂಸ್ಥೆಯ ಆರ್ ಜೆ ಅಮಿತ್ ಪವಾರ್ ಹಾಗೂ ಆರ್ ಜೆ ಸ್ಮಿತಾ ದೀಕ್ಷಿತ್ ಅವರು ರೂಪಿಸಿದ್ದ ಕಾರ್ಯಕ್ರಮಗಳು ಆಯೋಗದ ಪ್ರಶಸ್ತಿಗೆ ಭಾಜನವಾಗಿವುದು ಸಂತಸ ತಂದಿದೆ, ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್ ಎಮ್ ತಂಡಕ್ಕೆ ಧನ್ಯವಾದಗಳು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಆಯೋಗ ಪ್ರತಿ ವರ್ಷ ನವದೆಹಲಿಯಲ್ಲಿ ಜನವರಿ 25 ರಂದು ಹಮ್ಮಿಕೊಳ್ಳುವ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com