ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಎಸ್ ದಿನೇಶ್ ಕುಮಾರ್ ನೇಮಕ

ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ನೇಮಕಗೊಂಡಿದ್ದಾರೆ.
ಕರ್ನಾಟಕ ಹೈಕೋರ್ಟ್-ನ್ಯಾ. ಪಿ ಎಸ್ ದಿನೇಶ್ ಕುಮಾರ್
ಕರ್ನಾಟಕ ಹೈಕೋರ್ಟ್-ನ್ಯಾ. ಪಿ ಎಸ್ ದಿನೇಶ್ ಕುಮಾರ್

ನವದೆಹಲಿ: ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ನೇಮಕಗೊಂಡಿದ್ದಾರೆ.

ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಕೆಲವು ದಿನಗಳ ಹಿಂದೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನಂತರ ತೆರವಾಗಿದ್ದ ಸ್ಥಾನಕ್ಕೆ ಇದೀಗ ನ್ಯಾ. ಪಿ ಎಸ್ ದಿನೇಶ್ ಕುಮಾರ್ ನೇಮಕ ಮಾಡಲಾಗಿದೆ. ಅವರು ಫೆಬ್ರವರಿ 24 ರಂದು ನಿವೃತ್ತರಾಗುತ್ತಿದ್ದು, ಹೀಗಾಗಿ ಅವರು ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಕರ್ನಾಟಕ ಮುಖ್ಯನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.

ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರ ಉನ್ನತಿಗೆ ಶಿಫಾರಸು ಮಾಡುವಾಗ, ಸುಪ್ರೀಂ ಕೋರ್ಟ್ ಕೊಲಿಜಿಯಂ ಹೀಗೆ ಹೇಳಿದ್ದು, "ದಿನೇಶ್ ಕುಮಾರ್ ಅವರು ನೇಮಕವಾದಾಗಿನಿಂದ ಕರ್ನಾಟಕ ಹೈಕೋರ್ಟ್‌ಗೆ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರು ಅಲ್ಪಾವಧಿಯ ಅಧಿಕಾರಾವಧಿಯನ್ನು ಹೊಂದಿದ್ದಾರೆ. ಮೆಮೊರಾಂಡಮ್ ಆಫ್ ಪ್ರೊಸೀಜರ್, ಕೊಲಿಜಿಯಂ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲು ನಿರ್ಧರಿಸುತ್ತದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು 65 ವರ್ಷ ವಯಸ್ಸಾದ ಮೇಲೆ ಅಧಿಕಾರವನ್ನು ತ್ಯಜಿಸಿದರೆ, ಹೈಕೋರ್ಟ್ ನ್ಯಾಯಾಧೀಶರು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ಎಂದು ಹೇಳಿದೆ.

ಇದರ ನಡುವೆಯೇ ಪ್ರತ್ಯೇಕವಾಗಿ, ನ್ಯಾಯಾಂಗ ಅಧಿಕಾರಿ ಅರುಣ್ ಕುಮಾರ್ ರೈ ಅವರನ್ನು ಬುಧವಾರ ಜಾರ್ಖಂಡ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಅಲ್ಪಾವಧಿಯ ನ್ಯಾಯಾಧೀಶರನ್ನು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. 

ಜನವರಿ 19 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಪಿ ಬಿ ವರಾಳೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com