ಮೈಸೂರು: ಕಳೆದೆರಡು ತಿಂಗಳಿಂದ ಅರಮನೆ ನಗರಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ; ಕಾರಣವೇನು?

ಪ್ರತಿ ಹಣಕಾಸು ವರ್ಷದಲ್ಲಿ 3 ಲಕ್ಷದಿಂದ 3.25 ಲಕ್ಷ ವಿದೇಶಿ ಪ್ರವಾಸಿಗರು ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದರು.
ಮೈಸೂರು ಅರಮನೆ
ಮೈಸೂರು ಅರಮನೆ
Updated on

ಮೈಸೂರು: ಮೈಸೂರು ಪ್ರವಾಸಿಗರ ಸ್ವರ್ಗ. ಇಲ್ಲಿನ ಅದೆಷ್ಟೋ ಕುಟುಂಬ ಪ್ರವಾಸೋದ್ಯಮವನ್ನೇ ನಂಬಿ ಬದುಕು ಸಾಗಿಸುತ್ತವೆ. ಹೊರರಾಜ್ಯ ಹಾಗೂ ವಿದೇಶದಿಂದ ಬರುವ ಜನರೇ ಇಲ್ಲಿನ ಪ್ರವಾಸೋದ್ಯಮಕ್ಕೆ ಸಂಜೀವಿನಿ. ಕೊರೋನಾದಿಂದ ಕಂಗೆಟ್ಟಿದ್ದ ಮೈಸೂರು ಪ್ರವಾಸೋದ್ಯಮ ಕೆಲ ವರ್ಷಗಳಿಂದ ಚೇತರಿಕೆ ಕಾಣುತ್ತಿತ್ತು. ಆದರೆ, ಇದೀಗ ಮತ್ತೆ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖ ಕಂಡು ಬಂದಿದೆ.

ಅಂತರಾಷ್ಟ್ರೀಯ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವಲ್ಲಿ ಹಾಗೂ ಪ್ರವಾಸಿ ತಾಣಗಳ ಸಾಮರ್ಥ್ಯವನ್ನು ಬಳಸಿಕೊಳ್ಳುವಲ್ಲಿ ಅಧಿಕಾರಿಗಳ ವೈಫಲ್ಯ ಅಥವಾ ವಿದೇಶಿಯರಲ್ಲಿ ಆಸಕ್ತಿಯ ಕೊರತೆಯೇ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಪ್ರಸ್ತುತದ ಬೆಳವಣಿಗೆ ಇಲ್ಲಿನ ಪ್ರವಾಸೋದ್ಯಮವನ್ನೇ ನಂಬಿಕೊಂಡು ಬದುಕುತ್ತಿದ್ದವರಲ್ಲಿ ಕಳವಳವನ್ನುಂಟು ಮಾಡಿದೆ.

ಪ್ರತಿ ಹಣಕಾಸು ವರ್ಷದಲ್ಲಿ 3 ಲಕ್ಷದಿಂದ 3.25 ಲಕ್ಷ ವಿದೇಶಿ ಪ್ರವಾಸಿಗರು ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದರು. ಆದರೆ, ಕಳೆದ ವರ್ಷ ಈ ಸಂಖ್ಯೆ 2 ಲಕ್ಷವನ್ನು ಕೂಡ ದಾಟಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರವಾಸಿಗರ ಸಂಖ್ಯೆ ಇಳಿಮುಖಕ್ಕೆ ಅಸಮರ್ಪಕ ಮೂಲಸೌಕರ್ಯ ಮತ್ತು ಪ್ರಚಾರದ ಕೊರತೆ ಸೇರಿದಂತೆ ಹಲವು ಅಂಶಗಳು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಮೈಸೂರು ಅರಮನೆ
ಮೈಸೂರು: ಪ್ರವಾಸೋದ್ಯಮ ಉತ್ತೇಜಿಸಲು ವರ್ಷವಿಡೀ ಕಾರ್ಯಕ್ರಮ; ಹೆಚ್.ಸಿ ಮಹದೇವಪ್ಪ

2016-17ರಲ್ಲಿ ಮೈಸೂರಿಗೆ ಭೇಟಿ ನೀಡಿದ್ದ ವಿದೇಶಿ ಪ್ರವಾಸಿಗರ ಸಂಖ್ಯೆ 64,614 ರಷ್ಟಿತ್ತು. 2023-24ರಲ್ಲಿ 34,604 ಕ್ಕೆ ಇಳಿದಿತ್ತು. 2024 ರಲ್ಲಿ (ಡಿಸೆಂಬರ್ 31 ರವರೆಗೆ) ಸಂಖ್ಯೆ 24,034 ಕ್ಕೆ ಇಳಿದಿದೆ. 2020 ರಲ್ಲಿ ಸಾಂಕ್ರಾಮಿಕ ರೋಗದಿಂದಾಗಿ ಪ್ರವಾಸೋದ್ಯಮ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ಮತ್ತದೇ ಪರಿಸ್ಥಿತಿ ಎದುರಾಗಿದೆ. ಮೈಸೂರಿಗೆ ಕೆಲವೇ ವಿದೇಶಿ ಪ್ರವಾಸಿಗರು ಮಾತ್ರ ಭೇಟಿ ನೀಡಿದ್ದಾರೆಂದು ಇಲ್ಲಿನ ಗೈಡ್ (ಮಾರ್ಗದರ್ಶಕರು)ಗಳು ಹೇಳಿದ್ದಾರೆ.

ಟಿಕೆಟ್ ಬೆಲೆಯಲ್ಲಿನ ಏರಿಕೆಯೂ ಒಂದು ಕಾರಣವಾದರೂ ಪ್ರಚಾರದ ಕೊರತೆ ಹೆಚ್ಚು ಪರಿಣಾಮ ಬೀರಿದೆ ಎಂದು ಮೈಸೂರು ಅರಮನೆಯ ಪ್ರವಾಸಿ ಮಾರ್ಗದರ್ಶಿಯೊಬ್ಬರು ಹೇಳಿದ್ದಾರೆ.

ದಸರಾ ಹೊರತುಪಡಿಸಿ ದೊಡ್ಡ ಕಾರ್ಯಕ್ರಮಗಳು ಇಲ್ಲದಿರುವುದು ಮತ್ತು ಸರಿಯಾದ ಪ್ರವಾಸಿ ಸರ್ಕ್ಯೂಟ್ ಇಲ್ಲದಿರುವುದು ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com