ಹುಬ್ಬಳ್ಳಿ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನ ಬಂಧನ

ಮಂಗಳವಾರ ಈ ಘಟನೆ ನಡೆದಿದ್ದು, ಈ ಹಿಂದೆ ವಿದ್ಯಾರ್ಥಿನಿ ಜೊತೆ ಸಂಬಂಧ ಹೊಂದಿದ್ದ 23 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ
ಬಂಧಿತ ಆರೋಪಿ
Updated on

ಹುಬ್ಬಳ್ಳಿ: ಮೇಲೆ 20 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಆಕೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಮಾಜಿ ಪ್ರಿಯಕರನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಈ ಘಟನೆ ನಡೆದಿದ್ದು, ಈ ಹಿಂದೆ ವಿದ್ಯಾರ್ಥಿನಿ ಜೊತೆ ಸಂಬಂಧ ಹೊಂದಿದ್ದ 23 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಕೆಎಂಸಿಆರ್‌ಐ)ಯ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಎರಡನೇ ವರ್ಷದ ವಿದ್ಯಾರ್ಥಿನಿ, ತನ್ನ ಮಾಜಿ ಪ್ರಿಯಕರನಿಂದ ನಿರಂತರ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ನಿಂದ ಬೇಸತ್ತು ಮಹಿಳಾ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಮತ್ತು ಆರೋಪಿ ಈ ಹಿಂದೆ ಸಂಬಂಧದಲ್ಲಿದ್ದರು ಎಂದು ಹೇಳಿದ್ದಾರೆ.

ಬಂಧಿತ ಆರೋಪಿ
ಹುಬ್ಬಳ್ಳಿ: 18 ವರ್ಷದ ಯುವತಿ ಮದ್ವೆಯಾಗಿದ್ದ 50 ವರ್ಷದ ಅಂಕಲ್ ಅರೆಸ್ಟ್!

ಆದಾಗ್ಯೂ, ಬ್ರೇಕ್ ಅಪ್ ನಂತರ ಯುವಕ, ಆಕೆಯ ಫೋಟೋಗಳನ್ನು ಇಟ್ಟುಕೊಂಡು ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ ಎಂದು ಆರೋಪಿಸಲಾಗಿದೆ.

"ಮಹಿಳೆಯ ಪೋಷಕರು, ಆರೋಪಿಯು ತನ್ನ ಮಗಳ ಮೇಲೆ ದೈಹಿಕ ಹಲ್ಲೆ ನಡೆಸಿದ್ದು, ಮಾನಸಿಕ ಕಿರುಕುಳ ಮತ್ತು ಆಕೆಯ ಫೋಟೋಗಳು, ಸಂದೇಶಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಮಹಿಳೆ ಮತ್ತು ಆರೋಪಿ ಇಬ್ಬರೂ ಕುಂದಗೋಳ ಪಟ್ಟಣದವರಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಯುವಕ ಕಿರುಕುಳ ನೀಡಲು ಯತ್ನಿಸುತ್ತಿದ್ದ" ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ವಿದ್ಯಾರ್ಥಿನಿ ಈಗ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com