ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಿಸಿಲಿನ ತಾಪ ಹಚ್ಚಳ: ಕಿತ್ತೂರು, ಕಲ್ಯಾಣ ಕರ್ನಾಟಕದಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಯಾವುದೇ ಲೋಪ/ಅಡಚಣೆ ಇಲ್ಲದೆ ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
Published on

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೇಸಿಗೆಯ ಬಿಸಿಲನ್ನು ಪರಿಗಣಿಸಿ ರಾಜ್ಯ ಸರ್ಕಾರ ಕಿತ್ತೂರು ಕರ್ನಾಟಕದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಆದೇಶದ ಪ್ರಕಾರ, ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗಲಿದ್ದು, ಏಪ್ರಿಲ್ ನಿಂದ ಎರಡು ತಿಂಗಳವರೆಗೆ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಕಾರ್ಯನಿರ್ವಹಿಸುತ್ತವೆ.

ಈ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನದಿಂದಾಗಿ ನೌಕರರು ತಮ್ಮ ಕರ್ತವ್ಯ ನಿರ್ವಹಿಸಲು ಕಷ್ಟವಾಗುತ್ತಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬದಲಾಯಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರ ಈ ಆದೇಶ ಹೊರಡಿಸಿದೆ.

ಸಾಂದರ್ಭಿಕ ಚಿತ್ರ
ಏಪ್ರಿಲ್-ಜೂನ್ ನಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅಧಿಕ ಬಿಸಿಲು: IMD ಮುನ್ನೆಚ್ಚರಿಕೆ

2025 ರ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಹೆಚ್ಚಿನ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಬದಲಾಯಿಸಲು ಆದೇಶಿಸಲಾಗಿದೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಯಾವುದೇ ಲೋಪ/ಅಡಚಣೆ ಇಲ್ಲದೆ ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com